ಜಿಲ್ಲೆ

ಗ್ಯಾರಂಟಿಯಿಂದ ಹೊರಗುಳಿದವರಿಗೆ ಮಾಹಿತಿ: ಜಯಂತಿ ವಿ.ಪೂಜಾರಿ ಹೇಳಿಕೆ

Avinash R

ಬಂಟ್ವಾಳ: ಸರ್ಕಾರದ ಪಂಚಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶಿಬಿರಕ್ಕೆ ಬುಧವಾರ ಪುರಸಭೆಯಲ್ಲಿ ಚಾಲನೆ ನೀಡಲಾಯಿತು.

ಬಂಟ್ವಾಳ ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವರು ಯೋಜನೆಯಿಂದ ಹೊರಗುಳಿದಿದ್ದು, ಇದರ ಕುರಿತು ಸಮರ್ಪಕ ಮಾಹಿತಿ ನೀಡುವ ಸಲುವಾಗಿ ತಾಲೂಕಿನಾದ್ಯಂತ ಶಿಬಿರ ಆಯೋಜಿಸಲಾಗಿದೆ. ಈಗಾಗಲೇ ಮಣಿನಾಲ್ಕೂರು ಗ್ರಾಪಂನಲ್ಲಿ ನಡೆದ ಶಿಬಿರದಿಂದ ಆ ವ್ಯಾಪ್ತಿಗೆ ಒಳಪಟ್ಟ ಜನತೆ ಪ್ರಯೋಜನ ಪಡೆದಿದ್ದಾರೆ ಎಂದರು.

ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಅಧ್ಯಕ್ಷತೆ ವಹಿಸಿದರು. ಗ್ಯಾರಂಟಿ ಸಮಿತಿ ಸದಸ್ಯ ಕಾರ್ಯದರ್ಶಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ ಮಾತನಾಡಿದರು.

ಪುರಸಭಾ ಉಪಾಧ್ಯಕ್ಷ ಮೊನೀಶ್ ಆಲಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ, ಮೂಲ್ಕಿ ಅಧ್ಯಕ್ಷ ಆಲ್ವಿನ್ ಕುಟಿನ್ಹೊ, ಗ್ಯಾರಂಟಿ ಸಮಿತಿ ಸದಸ್ಯರಾದ ಐಡಾ ಸುರೇಶ್, ಸಿರಾಜ್ ಮಹಮ್ಮದ್, ಕೃಷ್ಣಪ್ಪ ಪೂಜಾರಿ, ಚಂದ್ರಶೇಖರ ಆಚಾರ್ಯ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರೋಡ್ರಿಗಸ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಪ್ರಮುಖರಾದ ಬಾಲಕೃಷ್ಣ ಅಂಚನ್, ರಾಜೇಶ್ ರೋಡ್ರಿಗಸ್, ಪುರಸಭೆಯ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು. ಉಮಾವತಿ ಸ್ವಾಗತಿಸಿ, ವಂದಿಸಿದರು.