ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆ ಮಾಹಿತಿ ಕಾರ್ಯಗಾರದಲ್ಲಿ ಕರಪತ್ರ ಬಿಡುಗಡೆಗೊಳಿಸಲಾಯಿತು.  
ಜಿಲ್ಲೆ

ಸ್ಪರ್ಧಾತ್ಮಕ ಯುಗದಲ್ಲಿ ಸಾಮರ್ಥ್ಯದ ಅರಿವು

ಇಂದಿರಾ ಎನ್ ಕೆ

ಕಾರ್ಕಳ: ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಾಮರ್ಥ್ಯವೇನು ಎಂಬುದನ್ನು ಅರಿತು ಅದರಂತೆ ಜೀವಿಸಬೇಕು. ಬೇರೆಯವರ ಜೀವನಶೈಲಿ ನಮ್ಮದಾಗದಿರಲಿ. ಸಕಾರಾತ್ಮಕ ಮನೋಭಾವ, ಚಿಂತನೆ ಅನುಸರಿಸಬೇಕು ಎಂದು ಉಡುಪಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಕ್ಲಿನಿಕಲ್ ಸೈಕಾಲಜಿಸ್ಟ್ ಕ್ಯಾಥರೀನ್ ಜೆನ್ನಿಫರ್ ಹೇಳಿದರು.

ಕಾರ್ಕಳದ ಕ್ರಿಯೆಟಿವ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ವಿಶ್ವ ಆತ್ಮಹತ್ಯೆ ವಿರೋಧಿ ದಿನಾಚರಣೆ ಕುರಿತ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.

ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಸಂದೀಪ್ ಕುಡ್ವ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ಪ್ರಾಂಶುಪಾಲ ಗಣಪತಿ ಭಟ್, ಹಿರ್ಗಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಮಾ, ಆಶಾ ಕಾರ್ಯಕರ್ತೆ ಸುಜಾತಾ, ಬೋಧಕ ಮತ್ತು ಬೋಧಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.