ಜಿಲ್ಲೆ

ಪತ್ರಕರ್ತರಿಂದ ಹಲವು ಸಮಸ್ಯೆ ಪರಿಹಾರ : ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಬಣ್ಣನೆ

ಸೌಮ್ಯ ಆರ್

ಬಂಟ್ವಾಳ: ಪತ್ರಕರ್ತರ ಸಮಾಜಮುಖಿ ಬರಹಗಳು ಗ್ರಾಮೀಣ ಪ್ರದೇಶದ ಹಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಿವೆ ಎಂದು ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪಿ.ಜಿನರಾಜ ಆರಿಗ ಹೇಳಿದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಕಾವಳಪಡೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ವಿದ್ಯಾರ್ಥಿಗಳ ಜತೆ ಪತ್ರಕರ್ತರು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆ ನೀಡಲಾಯಿತು.

ಪ್ರೌಢಶಾಲಾ ಮುಖ್ಯಶಿಕ್ಷಕ ಶೇಖ್ ಆದಂ ಸಾಹೇಬ್, ಪತ್ರಕರ್ತರಾದ ಸಂದೀಪ್ ಸಾಲ್ಯಾನ್, ಹರೀಶ್ ವಾಂಬಾಡಿ, ಮೌನೇಶ ವಿಶ್ವಕರ್ಮ, ಕಿಶೋರ್ ಪೆರಾಜೆ, ವಿಷ್ಣುಗುಪ್ತ ಪುಣಚ, ಅಬ್ದುಲ್ ರಹಿಮಾನ್, ಚಂದ್ರಶೇಖರ ಕಲ್ಮಲೆ ಸಹಕರಿಸಿದರು. ರತ್ನದೇವ್ ಪುಂಜಾಲಕಟ್ಟೆ ಸ್ವಾಗತಿಸಿದರು. ವೆಂಕಟೇಶ್ ಬಂಟ್ವಾಳ ಪ್ರಸ್ತಾವನೆಗೈದರು. ಪತ್ರಕರ್ತ ಗಣೇಶ ಪ್ರಸಾದ್ ಪಾಂಡೇಲು ವಂದಿಸಿದರು. ಕಿರಣ್ ಸರಪಾಡಿ ಕಾರ್ಯಕ್ರಮ ನಿರ್ವಹಿಸಿದರು.