ಜಿಲ್ಲೆ

ಪುಸ್ತಕದಿಂದ ದೊರಕುವ ವಿಚಾರ ಅಮೂಲ್ಯ : ಡಾ.ಸತೀಶ್ಚಂದ್ರ ಎಸ್. ಬಣ್ಣನೆ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಪುಸ್ತಕಗಳಿಂದ ದೊರಕುವ ಜ್ಞಾನಕ್ಕೆ ಯಾವುದೇ ಪರ್ಯಾಯ ಮಾರ್ಗಗಳಿಲ್ಲ. ಆದ್ದರಿಂದ ಪುಸ್ತಕದಿಂದ ದೊರಕುವ ವಿಚಾರ ಅತ್ಯಂತ ಅಮೂಲ್ಯ ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಹೇಳಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಅರ್ಥಶಾಸ ಮತ್ತು ಗ್ರಾಮೀಣಾಭಿವೃದ್ಧಿ ವಿಭಾಗ ಹಾಗೂ ಸುಬ್ರಹ್ಮಣ್ಯದ ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಕಾಲೇಜಿನ ಅರ್ಥಶಾಸ ವಿಭಾಗ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಪುಸ್ತಕ ಬಿಡುಗಡೆ ಹಾಗೂ ಕೌಟಿಲ್ಯನ ಅರ್ಥಶಾಸದಲ್ಲಿರುವ ಸಮಗ್ರ ಬೆಳವಣಿಗೆ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯ ಅರ್ಥಶಾಸ ವಿಭಾಗ ವಿಶ್ರಾಂತ ಪ್ರಾಧ್ಯಾಪಕ ಡಾ.ಜಿ.ವಿ.ಜೋಶಿ ಹಾಗೂ ಪ್ರೊ.ರಮೇಶ್ ಸಾಲ್ಯಾನ್ ಬರೆದಿರುವ ‘ಎ ಸರ್ಚ್ ಫಾರ್ ಇನ್‌ಕ್ಲೂಸಿವ್ ಗ್ರೋಥ್ ಇನ್ ಅರ್ಥಶಾಸ’ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಅರ್ಥಶಾಸ ವಿಭಾಗದಿಂದ ಸಂಪಾದಿಸಲಾದ ಮುಖ್ಯ ಸಂಕಲನಕಾರ ಡಾ.ಮಹೇಶ್ ಕುಮಾರ್ ಶೆಟ್ಟಿ ಎಚ್. ಮತ್ತು ಸಹ ಸಂಕಲನಕಾರ ಡಾ.ಗಣರಾಜ ಕೆ. ಅವರಿಂದ ಮೂಡಿದ ‘ರೂರಲ್ ಡೆವಲಪ್ಮೆಂಟ್ ಫಾರ್ ಜಾಬ್ ಕ್ರಿಯೇಶನ್ ಆ್ಯಂಡ್ ಪಾವರ್ಟಿ ಅಲಿವೇಶನ್ ಇನ್ ಎಮಜಿರ್ಂಗ್ ಎಕನಾಮೀಸ್’ ಪುಸ್ತಕ ಬಿಡುಗಡೆಗೊಳಿಸಲಾಯಿತು.

ನವದೆಹಲಿ ಜೆ.ಎನ್.ಯು. ವಿಶ್ವವಿದ್ಯಾಲಯದ ಅರ್ಥಶಾಸ ವಿಭಾಗ ಪೊ.ರಮೇಶ್ ಸಾಲ್ಯಾನ್, ಕಾರ್ಯಕ್ರಮ ಸಂಯೋಜಕ ಡಾ.ಮಹೇಶ್ ಕುಮಾರ್ ಶೆಟ್ಟಿ ಎಚ್., ಅರ್ಥಶಾಸ ವಿಭಾಗ ಮುಖ್ಯಸ್ಥ ಡಾ.ಗಣರಾಜ ಕೆ. ಹಾಗೂ ಸುಬ್ರಹ್ಮಣ್ಯ ಕಾಲೇಜು ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ. ಮೊದಲಾದವರಿದ್ದರು.

ಕಾರ್ಯಕ್ರಮ ಸಂಯೋಜಕ ಡಾ.ಮಹೇಶ್ ಕುಮಾರ್ ಶೆಟ್ಟಿ ಎಚ್ ಪ್ರಸ್ತಾವಿಸಿದರು. ಡಾ.ಗಣರಾಜ ಕೆ. ಸ್ವಾಗತಿಸಿದರು. ವಿದ್ಯಾರ್ಥಿನಿ ಮಾನ್ಯ ಕೆ.ಆರ್. ನಿರೂಪಿಸಿದರು. ರಕ್ಷಾ ಆರ್.ದೇವಾಡಿಗ ವಂದಿಸಿದರು.