ತುಮಕೂರು: ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಗತ್ಯ ಮೂಲಭೂತ ಸೌಕರ್ಯಗಳ ಒದಗಿಸುವ ಹಾಗೂ ಕುಂದುಕೊರತೆಗಳ ಬಗ್ಗೆ ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಮಹೇಶ್ರನ್ನು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಬೆಂಗಳೂರಿನಲ್ಲಿ ಭೇಟಿ ಮಾಡಿ ಗಮನಸೆಳೆಯಲಾಯಿತು.
ರಾಷ್ಟ್ರೀಯ ಹೆದ್ದಾರಿಯಿಂದ ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಹೋಗುವವರು ಹಾಗೂ ಬರುವವರಿಗೆ ಅನುಕೂಲವಾಗುವಂತೆ ನಿರ್ಮಾಣ ಮಾಡುತ್ತಿರುವ ಫ್ಲೈ ಓವರ್ ಮತ್ತು ಹಿರೇಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ರಸ್ತೆ ಹಾಗು ಮೂಲಭೂತ ಸೌಕರ್ಯಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಟಿ.ಜೆ.ಗಿರೀಶ್, ಮಾಜಿ ಅಧ್ಯಕ್ಷ ಸುಜ್ಞಾನ್ ಹಿರೇಮಠ್, ಖಜಾಂಚಿ ಶ್ರೀಕಂಠ ಸ್ವಾಮಿ, ನಿರ್ದೇಶಕರಾದ ಜಿ ಆರ್ ಸುರೇಶ್, ಮಹಮ್ಮದ್ ವಾಜೀದ್ ಉಪಸ್ಥಿತರಿದ್ದರು.