ಜಿಲ್ಲೆ

ಪಟಾಕಿ ದಾಸ್ತಾನು ಉಗ್ರಾಣ ಪರಿಶೀಲನೆಗೆ ಸೂಚನೆ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯಲ್ಲಿ 44 ಜನ ಪಟಾಕಿ ಮಾರಾಟಗಾರರಿದ್ದಾರೆ. ಪೊಲೀಸ್ ಹಾಗೂ ಕಂದಾಯ ಇಲಾಖೆ ಅಽಕಾರಿಗಳು ಪಟಾಕಿಗಳನ್ನು ದಾಸ್ತಾನು ಮಾಡಿರುವ ಉಗ್ರಾಣಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಷರತ್ತು ಉಲ್ಲಂಘಿಸಿರುವ ಹಾಗೂ ಅನುಮತಿಗಿಂತ ಹೆಚ್ಚು ಪಟಾಕಿ ಸಂಗ್ರಹ ಮಾಡಿದ್ದರೆ ಪ್ರಕರಣ ದಾಖಲಿಸಿ ಜಪ್ತಿ ಮಾಡಬೇಕು ಎಂದು ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಅನುಮತಿ ಪಡೆದ ಸ್ಥಳದಲ್ಲಿ ಮಾತ್ರ ಪಟಾಕಿ ಮಾರಾಟ ಮಾಡಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಪಟಾಕಿ ಸುಡುವಾಗ ತೊಂದರೆ, ಆರೋಗ್ಯ ಸಮಸ್ಯೆಯಾದರೆ ಚಿಕಿತ್ಸೆ ನೀಡಲು ಪ್ರತಿ ತಾಲೂಕಿನಲ್ಲಿ ಆರೋಗ್ಯ ತಂಡ ಹಾಗೂ ಅಗತ್ಯ ಔಷಧ ಹೊಂದುವAತೆ ಆರೋಗ್ಯ ಇಲಾಖೆ ಅಽಕಾರಿಗಳಿಗೆ ಸೂಚಿಸಿದರು.

ಎಸ್‌ಪಿ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಹಿರಿಯ ಪರಿಸರ ಅಽಕಾರಿ ಜಗದೀಶ ಐ.ಎಚ್. ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳಿದ್ದರು.