3ಕೋಟಿ ರೂ.ವೆಚ್ಚದ ಕಾಮಗಾರಿಗಳನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಬಿ.ನಿಂಗರಾಜಪ್ಪ ಭೇಟಿ ನೀಡಿ ಪರಿಶೀಲಿಸಿದರು. ಎರಿನ್ ಪ್ರತಿಷ್ಠಾನದ ಸಾಯಿಪ್ರಕಾಶ್ ಮತ್ತಿತರರು ಇದ್ದರು. 
ಜಿಲ್ಲೆ

ಶಾಲೆಗಳ ಅಭಿವೃದ್ಧಿಗೆ ಸಂಘ-ಸಂಸ್ಥೆಗಳ ಸಹಕಾರ ಅಗತ್ಯ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಆನೇಕಲ್
ತಾಲೂಕಿನ ಇಂಡ್ಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳಿಗೆ ಎಚ್‌ಎಎಲ್ ವತಿಯಿಂದ ಸಿಎಸ್‌ಆರ್ ಅನುದಾನದಡಿ ಸುಮಾರು 3 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಬಿ.ನಿಂಗರಾಜಪ್ಪ ಭೇಟಿ ನೀಡಿ ಪರಿಶೀಲಿಸಿದರು.
ತಾಲೂಕಿನ ಇಂಡ್ಲವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಮ್ಮನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕರಕಲಘಟ್ಟ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿನ್ನಯ್ಯನಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೊಣ್ಣನಾಯಕನಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಎಚ್‌ಎಎಲ್ ಕಂಪನಿಯ ಸಿಎಸ್‌ಆರ್ ಅನುದಾನದಡಿ ಶಾಲಾ ಕೊಠಡಿ, ಕಾಂಪೌಂಡ್, ಶೌಚಗೃಹ, ಸಭಾಂಗಣ ಸೇರಿ ವಿವಿಧ ಕಾಮಗಾರಿಗಳನ್ನು 3 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ.
ಉಪನಿರ್ದೇಶಕ ಕೆ.ಬಿ.ನಿಂಗರಾಜಪ್ಪ ಮಾತನಾಡಿ, ತಾಲೂಕಿನ ಹಿಂದುಳಿದ ಗ್ರಾಮಗಳಲ್ಲಿ ಎಚ್‌ಎಎಲ್ ಕಂಪನಿಯು ಶಾಲೆಗಳಿಗೆ ಅವಶ್ಯ ಸೌಲಭ್ಯ ಕಲ್ಪಿಸಿಕೊಟ್ಟಿರುವುದು ಶ್ಲಾಘನೀಯ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಘ-ಸಂಸ್ಥೆಗಳು, ಕೈಗಾರಿಕೆಗಳ ನೆರವು ಅವಶ್ಯ. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿವಿಧ ಸಂಘ-ಸಂಸ್ಥೆಗಳು ಸಹಕಾರ ನೀಡಿದ್ದರಿಂದ ಬೆಂಗಳೂರು ದಕ್ಷಿಣ ಜಿಲ್ಲೆ ರಾಜ್ಯದಲ್ಲಿ12ನೇ ಸ್ಥಾನದಲ್ಲಿದೆ. ಆನೇಕಲ್ ತಾಲೂಕು ಜಿಲ್ಲೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದರು.