ಬೆಟ್ಟದಪುರದ ರಾಗಿ ಖರೀದಿ ಕೇಂದ್ರಕ್ಕೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
ಜಿಲ್ಲೆ

ರಾಗಿ ಖರೀದಿ ಕೇಂದ್ರದಲ್ಲಿ ಪರಿಶೀಲನೆ

ಲೋಕೇಶ್ ಮನು. ಡಿ

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ರಾಗಿ ಖರೀದಿ ಕೇಂದ್ರಕ್ಕೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕೇಂದ್ರಕ್ಕೆ ಆಗಮಿದ ಬಳಿಕ ರಾಗಿ ಖರೀದಿ ಪ್ರಕ್ರಿಯೆ ಪರಿಶೀಲನೆ ನಡೆಸಿ, ಸ್ಥಳೀಯ ರೈತರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರೈತರಿಗೆ ಸಮಸ್ಯೆಯಾಗದಂತೆ ರಾಗಿ ಖರೀದಿ ಪ್ರಕ್ರಿಯೆ ನಡೆಸಬೇಕು. ಅಲ್ಲದೆ ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿ ಮಾಡಬೇಕು. ರೈತರು ಕೂಡ ಗುಣಮಟ್ಟದ ರಾಗಿ ತಂದು ಮಾರಾಟ ಮಾಡಬೇಕು ಎಂದು ತಿಳಿಸಿದರು.

ಆಹಾರ ಇಲಾಖೆಯ ಶಿರಸ್ತೇದಾರ್ ಸಣ್ಣಸ್ವಾಮಿ, ನಿರೀಕ್ಷಕ ಮಂಜುನಾಥ್, ಕೇಂದ್ರದ ಖರೀದಿ ಅಧಿಕಾರಿ ಲೋಕನಾಥ್ ಸೇರಿ ರೈತರು ಹಾಗೂ ಗ್ರಾಮಸ್ಥರು ಇದ್ದರು.