ಜಿಲ್ಲೆ

ಗ್ರಾ.ಪಂ. ಕಾಮಗಾರಿಗಳ ಪರಿಶೀಲನೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ ಅವರು ತಾಲೂಕಿನ ಮುಗದ ಮತ್ತು ಮಂಡಿಹಾಳ ಹಾಗೂ ಹೊನ್ನಾಪುರ ಗ್ರಾಮ ಪಂಚಾಯಿತಿಗಳಿಗೆ ಬುಧವಾರ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಮುಗದ ಗ್ರಾಮದಲ್ಲಿ ಕೈಗೊಂಡ ಜಲಜೀವನ್ ಮಿಷನ್ ಕಾಮಗಾರಿ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದರು. ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ಪರಿಶೀಲಿಸಿದರು. ಡಿಜಿಟಲ್ ಗ್ರಂಥಾಲಯವನ್ನು ವ್ಯವಸ್ಥಿತವಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದನ್ನು ಶ್ಲಾಘಿಸಿದರು. ಗ್ರಾಮ ಪಂಚಾಯಿತಿಯ ಕಟ್ಟಡ ಕಾಮಗಾರಿ ವೀಕ್ಷಿಸಿದರು.

ಮಂಡಿಹಾಳ ಗ್ರಾಮದಲ್ಲಿ ರೈತರ ಸಮಸ್ಯೆಗಳನ್ನು ಅಲಿಸಿ ಅಹವಾಲು ಸ್ವೀಕರಿಸಿದರು. ಬಳಿಕ ಹೊನ್ನಾಪುರ ಗ್ರಾಮಕ್ಕೆ ತೆರಳಿ ಅಂಗನವಾಡಿಗಳಲ್ಲಿ ಮಕ್ಕಳಿಗೆ ಮೂಲ ಸೌರ್ಯ ಕಡ್ಡಾಯವಾಗಿರುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವುದನ್ನು ಸಂಬ0ಧಿಸಿದವರು ನಿಗಾ ವಹಿಸಬೇಕು. ಆವರಣದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.

ನೀರಿನ ಕೊಳವೆ ಸಂಪರ್ಕಗಳ ಗುಣಮಟ್ಟ, ಮೀಟರ್‌ಗಳ ಸ್ಥಾಪನೆ, ಪೈಪ್‌ಲೈನ್ ಕಾಮಗಾರಿ, ರಸ್ತೆ ಪುನರ್‌ಸ್ಥಾಪನೆ ಮತ್ತು ಫೀ¯್ಡï ಟೆಸ್ಟ್ ಕಿಟ್‌ಗಳ ಮೂಲಕ ನೀರಿನ ಗುಣಮಟ್ಟ ಪರೀಕ್ಷೆಯ ಅಂಶಗಳನ್ನು ಪರಿಶೀಲಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಜಗದೀಶ, ಟಿಪಿ ಇಒ ಗಂಗಾಧರ ಕಂದಕೂರ, ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಽಗಳು, ಪಿಡಿಒ, ಗ್ರಾಮಸ್ಥರು ಉಪಸ್ಥಿತರಿದ್ದರು.