ಜಿಲ್ಲೆ

ಆಶ್ರಯ ಮನೆಗಳ ಕಾಮಗಾರಿ ಪರಿಶೀಲನೆ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಇಲ್ಲಿನ 39ನೇ ವಾರ್ಡ್​ನ ಶಿರಡಿ ನಗರದಲ್ಲಿ ಆಶ್ರಯ ಯೋಜನೆಯಡಿ ನಿಮಾಣವಾಗುತ್ತಿರುವ 224 ಮನೆಗಳ ನಿರ್ಮಾಣ ಕಾಮಗಾರಿಯನ್ನು ಶಾಸಕ ಮಹೇಶ ಟೆಂಗಿನಕಾಯಿ ಅವರು ಕೊಳಚೆ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಅವರೊಂದಿಗೆ ಬುಧವಾರ ಪರಿಶೀಲಿಸಿದರು.

ಗುಣಮಟ್ಟದ ಕಾಮಗಾರಿ ಜತೆಗೆ ನಿಗದಿತ ಸಮಯದಲ್ಲಿ ಮನೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಇಲ್ಲಿನ ಬಡ ಜನರು ಬಾಡಿಗೆ ಮನೆಗಳಲ್ಲಿ ವಾಸವಿದ್ದು, ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲವೆಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಆದ ಕಾರಣ ಮನೆಗಳ ನಿಮಾಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಪಾಲಿಕೆ ಸದಸ್ಯೆ ಸೀಮಾ ಮೊಗಲಿಶೆಟ್ಟರ್, ಬಿಜೆಪಿ ಮುಖಂಡ ಸಿದ್ದು ಮೊಗಲಿಶೆಟ್ಟರ, ಕೊಳಚೆ ಅಭಿವೃದ್ಧಿ ಮಂಡಳಿಯ ಆಯುಕ್ತರು ಹಾಗೂ ಇತರರು ಇದ್ದರು.