ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿಶೇಷ ಕಾರ್ಯಕ್ರಮವನ್ನು ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಉದ್ಘಾಟಿಸಿದರು. ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ, ಸಪ್ನಾ ಎನ್ ಶೆಟ್ಟಿ, ಪ್ರಶಾಂತ್ ಮೊದಲಾದವರಿದ್ದರು 
ಜಿಲ್ಲೆ

ವಿದ್ಯಾರ್ಥಿ ಜೀವನದಲ್ಲಿ ಗರಿಷ್ಠ ಅವಕಾಶ

ಇಂದಿರಾ ಎನ್ ಕೆ

ಹೆಬ್ರಿ: ವಿದ್ಯಾರ್ಥಿಗಳು ಕನಸು ಕಾಣಬೇಕು. ಅದು ನಮ್ಮನ್ನು ಗುರಿಯಡೆಗೆ ತಲುಪಿಸುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಮಾತ್ರ ಗರಿಷ್ಠ ಅವಕಾಶಗಳು ಸಿಗುತ್ತವೆ ಎಂದು ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ.ವಿರೂಪಾಕ್ಷ ದೇವರಮನೆ ಹೇಳಿದರು. ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಿನಗೆ ನೀನೇ ಶಿಲ್ಪಿ ಧ್ಯೇಯದೊಂದಿಗೆ ನಡೆದ ಯುವ ಮನಸ್ಸುಗಳಿಗೆ ಸ್ಫೂರ್ತಿದಾಯಕ ಮಾತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ ಶುಭಹಾರೈಸಿದರು. ಎಸ್‌ಆರ್ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಪ್ನಾ ಎನ್ ಶೆಟ್ಟಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಶಾಲಾ ಪ್ರಾಂಶುಪಾಲೆ ಭಗವತಿ, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಶಿಕ್ಷಕ ಗೋಪಾಲ ಆಚಾರ್ಯ, ಹಳೇ ವಿದ್ಯಾರ್ಥಿ ಡಾ.ಗುರುರಾಜ ಪಾಲನ್, ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ದೀಪಕ್ ಎನ್ ಸ್ವಾಗತಿಸಿದರು. ಉಪನ್ಯಾಸಕ ಹರಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.