ಹೆಬ್ರಿ: ಚಾರ ಮೇಲ್ಬೆಟ್ಟು ಶ್ರೀ ಬ್ರಹ್ಮಬೈದರ್ಕಳ ಮತ್ತು ಶಿವರಾಯ ಗರಡಿಯ ಬ್ರಹ್ಮಕಲಶೋತ್ಸವ ಅಂಗವಾಗಿ ಗುರುವಾರ ತುಳಸಿ ಆರಾಧನೆ, ಪುಣ್ಯಾಹ, ಪಂಚಗವ್ಯ ದೇವರ ಬಿಂಬ ಶುದ್ಧಿ, ಪಂಚಾಮೃತ ಅಭಿಷೇಕ, ಪ್ರಧಾನ ಹೋಮ, ಪ್ರಾಯಶ್ಚಿತ್ತ ಹೋಮ, ಬಿಂಬ ಪ್ರತಿಷ್ಠಾಪನೆ, ದೈವಗಳ ಪ್ರತಿಪ್ಠಾಪನೆ, ಸುದರ್ಶನ ಹೋಮ, ಶಿವರಾಯನಿಗೆ ಪಂಚ ವಿಂಶತಿ ಕಲಶದ ಮಂಡಳಿ ರಚನೆ ನೆರವೇರಿತು.
ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಗೌರವಾಧ್ಯಕ್ಷ ಬಿ.ಹರ್ಷ ಶೆಟ್ಟಿ ಹುತ್ತುರ್ಕೆ, ಆನುವಂಶಿಕ ಆಡಳಿತ ಮೋಕ್ತೇಸರ ಸುರೇಶ ಹೆಗ್ಡೆ ತಾರಾಳಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಎಂ.ಪ್ರಸನ್ನ ಕುಮಾರ್ ಶೆಟ್ಟಿ, ಆರ್ಥಿಕ ಸಮಿತಿ ಅಧ್ಯಕ್ಷ ವಾದಿರಾಜ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಮಿಥುನ್ ಶೆಟ್ಟಿ ಚಾರ, ಪುರೋಹಿತ್ ಸುಬ್ರಹ್ಮಣ್ಯ ಹೇರಳೆ, ಗರಡಿ ಪೂಜಾರಿ ವರ್ಗದ ಲಕ್ಷ್ಮಣ ಪೂಜಾರಿ, ಸುಧಾಕರ ಪೂಜಾರಿ, ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿ, ಆನುವಂಶಿಕ 9 ಮನೆಯವರು, ವಾರ್ಡ್ ಸಮಿತಿ ಮುಖ್ಯಸ್ಥರು, ಸದಸ್ಯರು ಉಪಸ್ಥಿತರಿದ್ದರು.