ಮಡಿಕೇರಿ: ಪೋ?ಕರು ಮಕ್ಕಳಲ್ಲಿ ಕನ್ನಡ ಭಾ?ಯ ಬಗ್ಗೆ ಅಭಿಮಾನ ಮೂಡಿಸಬೇಕು ಎಂದು ಮೂರ್ನಾಡುವಿನ ನಿವೃತ್ತ ದೈಹಿಕ ಶಿಕ್ಷಕರು ಹಾಗೂ ಕಾಫಿ ಬೆಳೆಗಾರರಾದ ಕಂಬಿರಂಡ ಕಿಟ್ಟು ಕಾಳಪ್ಪ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿ?ತ್ತು ಮತ್ತು ಮೂರ್ನಾಡುವಿನ ಪಿಎಂಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ, ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರು ರಚಿಸಿರುವ ಪತ್ತೆದಾರಿ ಕಾದಂಬರಿ ಕಣ್ಮರೆಯಾದ ಕಾಂತಮಣಿ ಪುಸ್ತಕ ಬಿಡುಗಡೆ ಮತ್ತು ಮೂರ್ನಾಡು ಹೋಬಳಿ ಶಾಲೆಗಳ ಶಿಕ್ಷಕರುಗಳಿಗೆ ಮೂರ್ನಾಡುವಿನ ಪಿಎಂ ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡನಾಡು ನುಡಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು. ಪೋ?ಕರು ಮಕ್ಕಳಲ್ಲಿ ಕನ್ನಡ ಭಾ?ಯ ಬಗ್ಗೆ ಅಭಿಮಾನ ಮೂಡಿಸಬೇಕು ಎಂದು ಕರೆ ನೀಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಮಾತನಾಡಿ, ಇದುವರೆಗೆ ಮಕ್ಕಳಿಗಾಗಿ ಪ್ರಬಂಧ ಸ್ಪರ್ಧೆ ನಡೆಯುತ್ತಿತ್ತು. ಇದೀಗ ಮೂರ್ನಾಡು ಹೋಬಳಿ ಘಟಕದ ವತಿಯಿಂದ ಮೊದಲ ಬಾರಿಗೆ ಶಿಕ್ಷಕರುಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿರುವುದು ವಿಭಿನ್ನ ಚಿಂತನೆಯಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಜಿಲ್ಲಾವ್ಯಾಪಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿ?ತ್ತಿನ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು ಮುಂದಿನ ದಿನಗಳಲ್ಲಿ ಸಾಹಿತ್ಯದ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷೆ ಕಡ್ಲೆರ ತುಳಸಿ ಮೋಹನ್ ಮಾತನಾಡಿ, ಮೂರ್ನಾಡಿನ ಜನರ ಕನ್ನಡ ಪ್ರೇಮ ಇತರರಿಗೆ ಮಾದರಿಯಾಗಿದೆ. ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪರಿಶ್ರಮದಿಂದ ಕನ್ನಡಪರ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮೂಡಿ ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಣ್ಮರೆಯಾದ ಕಾಂತಮಣಿ ಕಾದಂಬರಿಯ ರಚನೆಕಾರ ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಮಾತನಾಡಿ, ಸಾಹಿತ್ಯ ಕ್ಷೇತ್ರದ ಬೆಳವಣಿಗೆಯಲ್ಲಿ ಪುಸ್ತಕಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರು ಬರೆದಿರುವ ೨೩ನೇ ಪುಸ್ತಕ ಕಣ್ಮರೆಯಾದ ಕಾಂತಮಣಿಯನ್ನು ನಿವೃತ್ತ ಶಿಕ್ಷಕಿ ಹಾಗೂ ಸಾಹಿತಿ ದಂಬೆಕೋಡಿ ಸುಶೀಲ ಅವರು ಬಿಡುಗಡೆ ಮಾಡಿದರು. ಇದೇ ಸಂದರ್ಭ ಕಾರ್ಗಿಲ್ ವಿಜಯ ದಿನದ ಅಂಗವಾಗಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.
ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ಹೊದ್ದೂರು ಗ್ರಾ.ಪಂ ಅಧ್ಯಕ್ಷ ಎಚ್.ಎ.ಹಂಸ, ಪಿಎಂಶ್ರೀ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಎನ್.ಪುಷ್ಪಾವತಿ, ಕರ್ನಾಟಕ ಜಾನಪದ ಪರಿ?ತ್ ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ, ಸಾಹಿತಿ ವೈಲೇಶ್.ಪಿ.ಎಸ್, ಕಸಾಪದ ಜಿಲ್ಲಾ ಮಾಜಿ ಕಾರ್ಯದರ್ಶಿ ಮೊಹಮ್ಮದ್ ಅರಪಟ್ಟು ಇತರರಿದ್ದರು.
ಪ್ರಬಂಧ ಸ್ಪರ್ಧೆ ವಿಜೇತರು
ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕಿ ಕೆ.ಕೆ.ಪು? ಪ್ರಥಮ, ಮೂರ್ನಾಡು ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಬಿ.ಎನ್.ಗೌತಮಿ ದ್ವಿತೀಯ ಹಾಗೂ ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೆ.ಜಿ.ಭವಾನಿ ಶಂಕರ್ ತೃತೀಯ ಬಹುಮಾನ ಗಳಿಸಿದರು. ಅತಿಥಿ ಗಣ್ಯರು ಹಾಗೂ ಕನ್ನಡ ಸಾಹಿತ್ಯ ಪರಿ?ತ್ತಿನ ಮೂರ್ನಾಡು ಹೋಬಳಿ ಘಟಕದ ಪದಾಧಿಕಾರಿಗಳು ಬಹುಮಾನ ವಿತರಿಸಿದರು.