ಕೋಟ: ಶಿಕ್ಷಣ ಸಂಸ್ಥೆಗಳ ಭೌತಿಕ ಮತ್ತು ಶೈಕ್ಷಣಿಕ ಪರಿಸರದ ಅಭಿವೃದ್ಧಿಯೊಂದಿಗೆ ಸಮರ್ಪಣಾ ಮನೋಭಾವದಿಂದ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಶಿಕ್ಷಕರೇ ಶಿಕ್ಷಣ ಸಂಸ್ಥೆಗಳ ಬಹುದೊಡ್ಡ ಆಸ್ತಿ ಎಂದು ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಹೇಳಿದರು.
ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ಶಿಕ್ಷಕ ಕೆ.ನಾರಾಯಣ ಆಚಾರ್ಯ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ನಿವೃತ್ತ ಶಿಕ್ಷಕ ನಾರಾಯಣ ಆಚಾರ್ಯ ಅವರನ್ನು ಆಡಳಿತ ಮಂಡಳಿ, ಶಿಕ್ಷಕ ವೃಂದ ಮತ್ತು ಊರವರ ಪರವಾಗಿ ಸನ್ಮಾನಿಸಲಾಯಿತು. ಬ್ರಹ್ಮಾವರ ಹೋಬಳಿ ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ., ಆಡಳಿತ ಮಂಡಳಿ ಅಧ್ಯಕ್ಷ ಕೆ.ವಿಶ್ವೇಶ್ವರ ಹೊಳ್ಳ, ಶಿಶು ಕಲ್ಯಾಣ ಹಾಗೂ ವಿದ್ಯಾರಥ ಸಮಿತಿ ಅಧ್ಯಕ್ಷ ಕೆ.ವಿಶ್ವನಾಥ ಹೊಳ್ಳ, ಪಪಂ ಸದಸ್ಯೆ ಗಿರಿಜಾ ಶೇಖರ್ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಂಭು ಭಟ್ಟ, ಸಂಚಾಲಕ ಜಯಾ ಪಿ.ಕಾಮತ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಎನ್.ಪ್ರಭಾಕರ್ ಕಾಮತ್ ಸ್ವಾಗತಿಸಿ, ಶಿಕ್ಷಕರಾದ ಎನ್.ಸುಧೀರ್ ಕಾಮತ್ ನಿರೂಪಿಸಿದರು. ಬಿ.ಎನ್.ಸತ್ಯನಾರಾಯಣ ವಂದಿಸಿದರು.