ಜಿಲ್ಲೆ

ಸಾಂಸ್ಥಿಕ ಹೆರಿಗೆಗೆ ಒತ್ತು ನೀಡಲು ಡಾ. ತುಳಸೀರಂಗನಾಥ್ ಸಲಹೆ

ಹರ್ಷ ನ.ಪುರೋಹಿತ

ಸಿರಿಗೆರೆ: ಜನನಿ ಸುರಕ್ಷಾ ಯೋಜನೆಯಡಿ ಸಾಂಸ್ಥಿಕ ಹೆರಿಗೆಗಳನ್ನು ಹೆಚ್ಚಿಸುವುದು ಸಮುದಾಯ ಆರೋಗ್ಯ ಕೇಂದ್ರಗಳ ಮುಖ್ಯ ಕರ್ತವ್ಯ ಎಂದು ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ತುಳಸೀರಂಗನಾಥ್ ಹೇಳಿದರು.

ಗ್ರಾಮದಲ್ಲಿ ಈಚೆಗೆ ಆಯೋಜಿಸಿದ್ದ ಹಿರೆಗುಂಟನೂರು-ವಿಜಾಪುರ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತರು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ತಿಮ್ಮೇಗೌಡ, ಹೆರಿಗೆ ತಜ್ಞೆ ಡಾ.ಪವಿತ್ರಾ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಮಾತನಾಡಿದರು.

ಹಿರೇಗುಂಟನೂರು, ವಿಜಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜಯಶ್ರೀ, ಜಿಲ್ಲಾ ನರ್ಸಿಂಗ್ ಆಫೀಸರ್ ಶಾಂತಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ, ಜಾನಕಿ, ಹಿರಿಯ ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಗೌರಮ್ಮ, ಕಮಲಮ್ಮ, ಪರ್ವೀನ್, ಸುಶೀಲಾ, ಶೋಭಾ ಇದ್ದರು.