ಜಿಲ್ಲೆ

ಗುಣಮಟ್ಟದ ಕಾಮಗಾರಿಗೆ ಸೂಚನೆ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ತಾಲೂಕಿನ ಅಮ್ಮಿನಭಾವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಶುಕ್ರವಾರ ಭೇಟಿ ನೀಡಿ, ಮೆಲ್ದರ್ಜೆಗೆ ಏರಿದ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದರು.
2023ರಲ್ಲಿ ರಾಜ್ಯ ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೆಲ್ದರ್ಜೆಗೇರಿಸಿ, ಸಮುದಾಯ ಆರೋಗ್ಯ ಕೇಂದ್ರವಾಗಿ ಮಾಡಿದೆ. ಇದಕ್ಕೆ ಅಗತ್ಯ ನೂತನ ಕಟ್ಟಡ ನಿರ್ಮಾಣಕ್ಕೆ 9.3 ಕೋಟಿ ರೂ. ಅನುದಾನವನ್ನು ಹೆಲ್ತ್​ ಇಂಜಿನಿಯರಿಂಗ್​ ಇಲಾಖೆಗೆ ಬಿಡುಗಡೆ ಮಾಡಿದೆ. 30 ಹಾಸಿಗೆ ಸೌಲಭ್ಯದ ಈ ನೂತನ ಆಸ್ಪತ್ರೆ ನಿರ್ಮಾಣ ಕಾರ್ಯ ಕಾಲಮಿತಿಯಲ್ಲಿ ಹಾಗೂ ಗುಣಮಟ್ಟದ್ದಾಗಿರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಸ್ಥಾನಿಕ ವೈದ್ಯಾಧಿಕಾರಿ ಡಾ. ಡಾ.ಬೀನಾ ಶೂರ್ಪಾಲಿ, ಹೆಲ್ತ್​ ಇಂಜಿನಿಯರಿಂಗ್​ ಇಲಾಖೆ ಅಧಿಕಾರಿಗಳು, ಇತರರು ಇದ್ದರು.