ಸಿದ್ದಾಪುರ: ತಾಲೂಕಿನ ವಿವಿಧೆಡೆ ಶಾಸಕ ಭೀಮಣ್ಣ ನಾಯ್ಕ ಅವರು 1.20 ಕೋಟಿ ರೂ.ಗಳ ವೆಚ್ಚದ ರಸ್ತೆ ಕಾಮಗಾರಿಗೆ ಗುರುವಾರ ಶಂಕುಸ್ಥಾಪನೆೆ ನೆರವೇರಿಸಿ ಗುಣಮಟ್ಟದ ಕಾಮಗಾರಿ ಕೈಗೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ತಾಲೂಕಿನ ಚಂದ್ರಘಟಗಿ, ಅಳವಳ್ಳಿ, ಹುಕ್ಕಳಿ ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ 60 ಲಕ್ಷ ರೂ.ಗಳ ವೆಚ್ಚದಲ್ಲಿ ಹಾಗೂ ಹುಕ್ಕಳಿ, ವಾಜಗಾರ ಕ್ರಾಸ್, ಕೊಡನಮನೆ ರಸ್ತೆಗೆ 60 ಲಕ್ಷ ರೂ. ವೆಚ್ಚದ ಮರು ಡಾಂಬರೀಕರಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಹರಕನಳ್ಳಿಯ ವೀರಭದ್ರೇಶ್ವರ ದೇವಸ್ಥಾನದ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡರು.
ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಹಲಗೇರಿ ಗ್ರಾಪಂ ಅಧ್ಯಕ್ಷೆ ಮೋಹಿನಿ ನಾಯ್ಕ, ವಾಜಗೋಡ ಗ್ರಾಪಂ ಅಧ್ಯಕ್ಷೆ ಚಂದ್ರಕಲಾ ನಾಯ್ಕ.ಇಂದಿರಾ ನಾಯ್ಕ, ಸಿ.ಆರ್. ನಾಯ್ಕ, ಇತರರಿದ್ದರು.