ಜಿಲ್ಲೆ

ವ್ಯವಸ್ಥಿತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸೂಚನೆ

ಆದರ್ಶ್. ಎಂ.ಕೆ.

ಮಡಿಕೇರಿ: ದ್ವಿತೀಯ ಪಿಯುಸಿ ಪರೀಕ್ಷೆ-೨ನ್ನು ವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-೨ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪರೀಕ್ಷೆ-೧ ನಡೆಸಿದಂತೆ ಪರೀಕ್ಷೆ-೨ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಮಾತನಾಡಿ ಏ.೨೪ ರಿಂದ ಮೇ.೮ ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-೨ ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು ೩೪೭೦ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ವೆಬ್‌ಕಾಸ್ಟಿಂಗ್ ಸಹ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಇತರರು ಇದ್ದರು.