ವಿಜಯಪುರದ ಮಹಾತ್ಮ ಗಾಂಧಿ ರಸ್ತೆ ಬಿಕೋ ಎನ್ನುತ್ತಿರುವುದು. 
ಜಿಲ್ಲೆ

ಡಾ.ಅಂಬೇಡ್ಕರ್ ಕುರಿತು ಅವಹೇಳನ, ವಿಜಯಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ಖಂಡಿಸಿ ಹಾಗೂ ಷಾ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೈ ಬಿಡಲು ಆಗ್ರಹಿಸಿ ಕರೆ ನೀಡಲಾದ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು ಉತ್ತಮ ಪ್ರತಿಕ್ರಿಯಿ ಸಿಕ್ಕಿದೆ.

ಅಹಿಂದ, ರೈತ, ಕಾರ್ಮಿಕ, ಮಹಿಳಾ ಮತ್ತು ಲೈಂಗಿಕ ಅಲ್ಪಸಂಖ್ಯಾತ ರ ಒಕ್ಕೂಟ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಬಂದ್ ಯಶಸ್ವಿಯಾಗಿ ಮುಂದುವರಿಯಿತು.

ಬಸ್, ಆಟೋ ಸೇವೆ ಸಂಪೂರ್ಣ ಸ್ಥಗಿತಗೊಂಡಿದ್ದು, ಅಂಗಡಿ- ಮುಂಗಟ್ಟುಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ವ್ಯಾಪಾರ- ವಹಿವಾಟು ಬಂದ್ ಗೊಳಿಸಿದರು. ಗಾಂಧಿ ಚೌಕ್, ಬಸವೇಶ್ವರ ಚೌಕ್, ಬಾಗಲಕೋಟೆ ರಸ್ತೆ, ಬಬಲೇಶ್ವರ ನಾಕಾ, ಸೋಲಾಪುರ ರೋಡ್, ಆಶ್ರಮ ರಸ್ತೆಗಳೆಲ್ಲ ಬಿಕೋ ಎನ್ನುತ್ತಿದ್ದವು. ಪ್ರಮುಖ ಮಾರ್ಗಗಳಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು.

ತಿಕೋಟಾ ತಾಲೂಕಿನ ತೊರವಿ ಗ್ರಾಮದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ವಿಜಯಪುರ ಅಥಣಿ ರಾಷ್ಟ್ರೀಯ ಹೆದ್ದಾರಿ 548 B ಬಂದ್ ಮಾಡಿ ಹೋರಾಟ ನಡೆಸಲಾಯಿತು.