ಜಿಲ್ಲೆ

ಫೇಸ್‌ಬುಕ್‌ನಲ್ಲಿ ಶಿವಾಜಿ ಮಹಾರಾಜರಿಗೆ ಅವಮಾನ ಕುಂದಗೋಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಕುಂದಗೋಳ: ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಪಟ್ಟಣದ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದರಿಂದ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಆಯಾ ಕಟ್ಟಿನಲ್ಲಿ 2 ಡಿಎಆರ್ ವಾಹನ ನಿಯೋಜಿಸಲಾಗಿದೆ.

ಪಟ್ಟಣದ ಕಾಳಿದಾಸ ನಗರದ ಶಿವು ಅರಳಿಕಟ್ಟಿ ಎಂಬ ಯುವಕ ಫೇಸ್‌ಬುಕ್‌ನಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ಭಯೋತ್ಪಾದಕ ಮತ್ತು ಭಯೋತ್ಪಾದಕರ ಆರಾಧ್ಯ ದೈವ ಎಂದು ಸಂಬೋದಿಸಿ ಹಿಂದು ಧರ್ಮಕ್ಕೆ ಮತ್ತು ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾನೆ.

ಹೀಗಾಗಿ ಈತನ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮರಾಠಾ ಸಮಾಜದ ಮುಖಂಡರಾದ ವಿಠ್ಠಲ ಚವ್ಹಾಣ ಕುಂದಗೋಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.