ಜಿಲ್ಲೆ

ಅಡಕೆ, ಮೆಣಸು, ಮಾವು, ಶುಂಠಿಗೂ ವಿಮೆ

Shivamogga - Desk - Praveena Kumar S

ಶಿವಮೊಗ್ಗ: ಸರ್ಕಾರದ ಆದೇಶದಂತೆ 2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯನ್ನು ಗ್ರಾಪಂ ಮಟ್ಟದಲ್ಲಿ ಜಾರಿಗೊಳಿಸಲಾಗುತ್ತಿದೆ. ಅಡಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಬಹುದು. ನೋಂದಣಿಗೆ ಜು.31 ಅಂತಿಮ ದಿನ. ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಆಧಾರ್ ಕಾರ್ಡ್, ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ಬ್ಯಾಂಕ್ ಅಥವಾ ಸಮೀಪದ ಸಾರ್ವಜನಿಕ ಸಂಪರ್ಕ ಕೇಂದ್ರ, ಇಲ್ಲವೇ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ.ಎನ್.ಪ್ರಕಾಶ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ತಾಲೂಕು ತೋಟಗಾರಿಕೆ ಇಲಾಖೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು.