ನಾಪೋಕ್ಲು: ವಿದ್ಯಾರ್ಥಿಗಳು ದೈಹಿಕ ಆರೋಗ್ಯದ ಜತೆಗೆ, ಮಾನಸಿಕ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಅರಮೇರಿಯ ಎಸ್‌ಎಂಎಸ್ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ ಎಂದರು. ಎಸ್‌ಎಂಎಸ್ ಕಾಲೇಜಿನ ಪ್ರಾಂಶುಪಾಲ ಬಲ್ಲಚಂಡ ಕುಸುಮ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಕಾಲೇಜಿನ ನಿರ್ದೇಶಕ ಸಚಿನ್, ವಾಟೀರಿರ ಸಪ್ನ ಸುಬ್ಬಯ್ಯ ಹಾಜರಿದ್ದರು.
ಸರ್ವೋದೈವತಾ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಬಹುಮಾನ ಪಡೆದುಕೊಂಡವು. ಗೋಣಿಕೊಪ್ಪದ ಕಾವೇರಿ ಕಾಲೇಜು ತಂಡ ಹಾಗೂ ಪೊನ್ನಂಪೇಟೆಯ ಅಂತೋನಿ ಕಾಲೇಜು ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು.