ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಮತ್ತು ಬೆಂಗಳೂರು ಸೇರಿ ಮೂವತ್ತೈದು ಘಟಕಗಳನ್ನು ಹೊಂದಿರುವ ಯುವವಾಹಿನಿ ಕೇಂದ್ರ ಸಮಿತಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ, ಆದರ್ಶಗಳನ್ನು ಪಾಲಿಸಿಕೊಂಡು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸುತ್ತ ಬರುತ್ತಿದೆ. ಯುವವಾಹಿನಿ ಕೇಂದ್ರ ಸಮಿತಿ ಪ್ರತಿ ವರ್ಷ ಬೇರೆ ಬೇರೆ ಕಾರ್ಯಕ್ರಮಗಳ ಮೂಲಕ ಘಟಕಗಳ ಸದಸ್ಯರ ಪ್ರತಿಭೆಗಳಿಗೆ ಸೂಕ್ತ ವೇದಿಕೆಗಳನ್ನು ಕಲ್ಪಿಸಿಕೊಟ್ಟು ಅವರ ಸಾಧನೆಗಳ ಪರಿಚಯ ಮಾಡುತ್ತಿದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಜೈಲಬರಿ ಹೇಳಿದರು.
ಸೋಮವಾರ ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಯುವವಾಹಿನಿ ಬೆಳ್ತಂಗಡಿ ಘಟಕದ ಅತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಸಹಯೋಗದೋಂದಿಗೆ, ಡಿ.1 ರಂದು ಬೆಳಗ್ಗೆ 8.30 ರಿಂದ ಸಂಜೆ 4ರವರೆಗೆ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಯುವವಾಹಿನಿ ನಡೆಯಲಿದೆ ಎಂದರು.
ಈಗಾಗಲೇ ಹಲವಾರು ಘಟಕಗಳು ಸ್ಪರ್ಧೆಯಲ್ಲಿ ಭಾಗವಹಿಸಲು ಹೆಸರು ನೋಂದಣಿ ಮಾಡಿದ್ದು, ಕಾರ್ಯಕ್ರಮ ಧ್ವಜಾರೋಹಣದೊಂದಿಗೆ ಪ್ರಾರಂಭಗೊಂಡು ನಂತರ ಸ್ಪರ್ಧೆಗಳು ಪ್ರಾರಂಭವಾಗಲಿವೆ. ಮಧ್ಯಾಹ್ನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಒಬ್ಬರಿಗೆ ರಂಗ್ ಸಮ್ಮಾನ್ ನೀಡಿ ಗೌರವಿಸಲಿದ್ದೇವೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, 35 ಘಟಕಗಳ ಸದಸ್ಯರು ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲ ಗ್ರಾಮ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಯುವವಾಹಿನಿ ಬೆಳ್ತಂಗಡಿ ಘಟಕ ಅಧ್ಯಕ್ಷ ಸದಾಶಿವ ಊರ, ಡೆನ್ನಾನ ಡೆನ್ನನ ಪ್ರಧಾನ ಸಂಚಾಲಕ ಪ್ರಶಾಂತ್ ಮಚ್ಚಿನ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ.ಕೆ, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ನಿರ್ದೇಶಕ ಹರೀಶ್ ಸುವರ್ಣ ಕನ್ಯಾಡಿ, ಯುವವಾಹಿನಿ ಬೆಳ್ತಂಗಡಿ ಘಟಕ ಮಾಜಿ ಅಧ್ಯಕ್ಷೆ ಸುಜಾತ ಅಣ್ಣಿ ಪೂಜಾರಿ, ಯುವವಾಹಿನಿ ಬೆಳ್ತಂಗಡಿ ಘಟಕ ಮಾಜಿ ಅಧ್ಯಕ್ಷ ಅಶ್ವಥ್ ಕುಮಾರ್, ಯುವವಾಹಿನಿ ಬೆಳ್ತಂಗಡಿ ಘಟಕ ಕಾರ್ಯದರ್ಶಿ ಯಶೋಧರ ಮುಂಡಾಜೆ, ಯುವವಾಹಿನಿ ಬೆಳ್ತಂಗಡಿ ಘಟಕ ನಿರ್ದೇಶಕರಾದ ಚಂದ್ರಹಾಸ ಬಳಂಜ, ಪೃಥ್ವಿರಾಜ್ ಉಪಸ್ಥಿತರಿದ್ದರು.