ಧಾರವಾಡ: ಹೆಸ್ಕಾಂ ಶಹರ ಉಪ ವಿಭಾಗ ವ್ಯಾಪ್ತಿಯಲ್ಲಿ ಉಪ ವಿಭಾಗಾಧಿಕಾರಿ ಮಂಜುನಾಥ ಟಿಂಗರಿಕರ ಅಧ್ಯಕ್ಷತೆಯಲ್ಲಿ ಅ. 19ರಂದು ವಿದ್ಯಾಗಿರಿಯ ಹೆಸ್ಕಾಂ ಕಚೇರಿಯಲ್ಲಿ ಗ್ರಾಹಕರೊಂದಿಗೆ ಸಂವಾದ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದ್ದು, ಗ್ರಾಹಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ನೋಂದಾಯಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.