ದೊಡ್ಡಬಳ್ಳಾಪುರ : ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಆ.1ರಂದು ದಲಿತ ಸಮುದಾಯದ ಮುಖಂಡರಿಂದ ಅರೆಬೆತ್ತಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಬಚ್ಚಹಳ್ಳಿ ನಾಗರಾಜು ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ವಿವಿಧ ದಲಿತ ಸಂಟನೆಗಳ ಮುಖಂಡರಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಆದೇಶ ನೀಡಿದ್ದರೂ ಈವರೆಗೂ ರಾಜ್ಯದಲ್ಲಿ ಯಾವುದೇ ಒಳಮೀಸಲಾತಿ ೂಷಣೆಯಾಗಿಲ್ಲ. ಚುನಾವಣೆಗೂ ಮುನ್ನ ಒಳ ಮೀಸಲಾತಿ ನೀಡುವ ಭರವಸೆ ನೀಡಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಮರೆತಿದ್ದಾರೆ. ಈಗಾಗಲೇ ಸಮೀೆ ನಡೆಸುತ್ತಿದ್ದರೂ ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ. ನಮ್ಮ ತಾಳ್ಮೆಗೂ ಮಿತಿ ಇದ್ದು, ಆ.1ರಂದು ಜಿಲ್ಲೆಯ ನಾಲ್ಕೂ ತಾಲೂಕುಗಳ ಎಲ್ಲ ದಲಿತಪರ ಪ್ರಗತಿಪರ ಸಂಟನೆಗಳ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಅರೆಬೆತ್ತಲೆ ಪ್ರತಿಭಟನೆ ನಡೆಸಲಿದ್ದೇವೆ. ಸರ್ಕಾರ ಕೂಡಲೇ ಎಚ್ಚೆದ್ದು ಆ.12ರಂದು ನಡೆಯುವ ಸಚಿವ ಸಂಪುಟದ ಒಳಗಾಗಿ ವಿಶೇಷ ಸಂಪುಟ ಸಭೆಯನ್ನು ಕರೆದು ಒಳ ಮೀಸಲಾತಿರ ಘೋಷಿಸಬೇಕು. ಇಲ್ಲವಾದಲ್ಲಿ ಆ.16ರ ನಂತರ ರಾಜ್ಯಾದ್ಯಂತ ಎಲ್ಲ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮುಖಂಡ ದೊಡ್ಡತುಮಕೂರು ವೆಂಕಟೇಶ್ ಮಾತನಾಡಿ, ಮುಖ್ಯಮಂತ್ರಿಗಳ ಭರವಸೆ ಮಾತಿಗೆ ಕಾದುಕಾದು ಸಾಕಾಗಿದೆ. ನಾವು ಕೇಳುತ್ತಿರುವುದು ನಮ್ಮ ಹಕ್ಕು. ಜನಸಂಖ್ಯೆಯಲ್ಲಿ ಹೆಚ್ಚಾಗಿರುವ ನಮಗೆ ಒಳ ಮೀಸಲಾತಿಯನ್ನು ಈ ಕೂಡಲೇ ಕಲ್ಪಿಸಬೇಕು. ನುಡಿದಂತೆ ನಡೆದಿದ್ದೇವೆ ಎನ್ನುವ ಕಾಂಗ್ರೆಸ್ ಸರ್ಕಾರಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ದಲಿತ ಸಮುದಾಯಗಳಿಗೆ ಕೊಟ್ಟಿರುವ ಮಾತು ಮರೆತಿದೆ. ಇನ್ನಾದರೂ ಮುಖ್ಯಮಂತ್ರಿಗಳು ಎಚ್ಚೆತ್ತು ದಲಿತ ಸಮುದಾಯಗಳಿಗೆ ಸೇರಬೇಕಿರುವ ಸೂಕ್ತ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಜಾರಿಗೊಳಿಸಬೇಕು ಎಂದರು.