ಜಿಲ್ಲೆ

ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಬೆಂಗಳೂರಿನ ಸಿ. ಶಿರೀಶ್

ಪಂಕಜ ಕೆ.ಎಂ.

ಬೆಂಗಳೂರು: ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ೆಡರೇಷನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ಸಹಯೋಗದಲ್ಲಿ ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಬೆಂಗಳೂರಿನ 11 ವರ್ಷದ ಬಾಲಕ ಸಿ. ಶಿರೀಶ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳಿಂದ 80 ಸ್ಪರ್ಧಿಗಳು ಭಾಗವಹಿಸಿದ್ದು, ಈ ಪೈಕಿ 11-15 ವಯಸ್ಸಿನ ವಿಭಾಗದಲ್ಲಿ ಭಾರತದಿಂದ ಪ್ರತಿನಿಧಿಸಿದ್ದ ಬೆಂಗಳೂರಿನ ನಾಗರಬಾವಿ ಬಳಿಯ ಕಲ್ಯಾಣ ನಗರ ನಿವಾಸಿ ಚೇತನ್ ಮತ್ತು ಸುಧಾ ದಂಪತಿ ಪುತ್ರ ಯೋಗ ಪ್ರದರ್ಶನದ ಮೂಲಕ ಪ್ರಥಮ ಸ್ಥಾನ ಗಳಿಸಿದ್ದು, ದೇಶಕ್ಕೆ ಹಾಗೂ ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆ.

ಇವರ ಈ ಸಧಾನೆಗೆ ದೀರ್ಘಾಯು ಇನ್‌ಸ್ಟಿಟ್ಯೂಟ್ ಆ್ ಯೋಗ ಹಾಗೂ ಬನಶಂಕರಿಯ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕರು ಸೇರಿ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.