ಜಿಲ್ಲೆ

ಸಚಿವ ಸಂತೋಷ ಲಾಡ್ ಹೇಳಿಕೆ; ಡಾ. ಅಂಬೇಡ್ಕರ್ ಒಂದು ಜಾತಿಗೆ ಸೀಮಿತವಲ್ಲ

ಧಾರವಾಡ: ನಮ್ಮ ಅಮೂಲ್ಯ ಸಂವಿಧಾನ ಭಾರತೀಯ ಪ್ರಜಾಪ್ರಭುತ್ವದ ಜೀವಾಳ. ಬಡವ, ಹಿಂದುಳಿದ, ಕಾರ್ಮಿಕ, ಮಹಿಳೆ, ಮಕ್ಕಳು ಸೇರಿ ಸರ್ವ ಸಮುದಾಯದ ಹಿತರಕ್ಷಣೆಗೆ ಸಂವಿಧಾನ ರೂಪಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ಒಂದು ಜಾತಿಗೆ ಸೀಮಿತರಲ್ಲ. ಅವರು ಸರ್ವ ಜನರ ಹಿತರಕ್ಷಕರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ ಕರ್ನಾಟಕ ಕಾಲೇಜು ಆವರಣದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಂವಿಧಾನದ ಅರಿವು ಎಲ್ಲರಿಗೂ ಅಗತ್ಯ. ಪ್ರತಿಯೊಬ್ಬರಿಗೂ ಸಮಾನತೆ, ಸೌಹಾರ್ದತೆ, ಸಹೋದರತ್ವ, ಶಾಂತಿ, ನೆಮ್ಮದಿ ದೊರಕಲು ಸಂವಿಧಾನ ನೀಡಿರುವ ಅವಕಾಶಗಳು ಕಾರಣವಾಗಿವೆ. ಕೆಲ ಅನ್ಯ ಹಿತಾಸಕ್ತಿಗಳು ಸಂವಿಧಾನವನ್ನು ವಿರೋಽಸುತ್ತಿವೆ. ಅಂಥವರನ್ನು ಪ್ರತಿಯೊಬ್ಬರೂ ವಿರೋಽಸಬೇಕು. ಸಂವಿಧಾನದ ಪಾವಿತ್ರ‍್ಯತೆ, ಪ್ರಾಮುಖ್ಯತೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಗುರುತರ ಜವಾಬ್ದಾರಿ ಎಂದರು.
ಮುಖ್ಯಮAತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ವೇದಿಕೆಯಿಂದ ರಾಜ್ಯದ ಜನತೆಗೆ ಸಂವಿಧಾನದ ಪೀಠಿಕೆಯನ್ನು ಬೋಽಸಿದರು. ಅದನ್ನು ವೀಕ್ಷಿಸಿದ ಸಚಿವರು, ಅಽಕಾರಿಗಳು, ಸಾರ್ವಜನಿಕರು ಸಂವಿಧಾನ ಪೀಠಿಕೆಯ ಪ್ರತಿಜ್ಞೆ ಸ್ವೀಕರಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ಐ.ಜಿ. ಸನದಿ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ., ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕಾಷ್ ನದಾಫ್ ವಂದಿಸಿದರು.