sportsಸಜಿಪ ಮುನ್ನೂರು ಗ್ರಾಮ ಪಂಚಾಯತಿಯ ಅರಿವು ಕೇಂದ್ರದಲ್ಲಿ ಅಂತಾರಾಷ್ಟ್ರೀಯ ಆಟದ ದಿನ ಆಚರಿಸಲಾಯಿತು.  
ಜಿಲ್ಲೆ

ಸಜಿಪದಲ್ಲಿ ಅಂತಾರಾಷ್ಟ್ರೀಯ ಆಟದ ದಿನ

ಬಂಟ್ವಾಳ: ಸಜಿಪ ಮುನ್ನೂರು ಗ್ರಾಮ ಪಂಚಾಯಿತಿಯ ಅರಿವು ಕೇಂದ್ರದಲ್ಲಿ ಮಂಗಳವಾರ ಅಂತಾರಾಷ್ಟ್ರೀಯ ಆಟದ ದಿನ ಆಚರಿಸಲಾಯಿತು. ಗ್ರಾಮ ಪಂಚಾಯತಿ ಅಧ್ಯಕ್ಷೆ ಅನಿತಾ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತಿ ಅಭಿವೃದ್ದಿ ಅಧಿಕಾರಿ ಲಕ್ಷ್ಮಣ್ ಎಚ್.ಕೆ ಅಂತಾರಾಷ್ಟ್ರೀಯ ಆಟದ ದಿನದ ಉದ್ದೇಶವನ್ನು ವಿವರಿಸಿದರು. ಕಾರ್ಯಕ್ರಮದ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಚೆಸ್, ಲೂಡೋ, ಕೇರಂ, ಫಜಲ್, ಕ್ಯೂಬ್ ಒಳಾಂಗಣ ಆಟಗಳನ್ನು ಆಡಿಸಲಾಯಿತು. ಗ್ರಾಮ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಚಂದ್ರಕಲಾ, ಸದಸ್ಯ ಸಂದೀಪ್ ಕುಮಾರ್ ಹಾಗೂ ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು. ಜಯಶ್ರೀ ವಂದಿಸಿದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಮಹಮ್ಮದ್ ಹಾರಿಸ್, ನಳಿನಿ ಸಹಕರಿಸಿದರು.