ಉಳ್ಳಾಲ: ದಿನವಿಡೀ ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ದಾದಿಯರು ತಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳುವತ್ತ ಮೊದಲ ಆದ್ಯತೆ ನೀಡಬೇಕು ಎಂದು ಕ್ಷೇಮಾ ಡೀನ್ ಡಾ.ಸಂದೀಪ್ ರೈ ಹೇಳಿದರು.
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯಕ್ಕೆ ಸೇರಿದ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ ನಸಿರ್ಂಗ್ ವಿಭಾಗದ ಆಶ್ರಯದಲ್ಲಿ ಸೋಮವಾರ ಆಸ್ಪತ್ರೆಯ ಚಿಂತನಾ ಸೆಮಿನಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ದಾದಿಯರ ದಿನ ಉದ್ಘಾಟಿಸಿ ಮಾತನಾಡಿ, ವೈದ್ಯರು ಸೀಮಿತ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದರೆ ದಿನದ ಬಹುತೇಕ ಸಮಯ ರೋಗಿಗಳ ಜತೆ ದಾದಿಯರೇ ಇರುವುದು ಎಂದರು.
ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸುಮಲತಾ ಅರ್.ಶೆಟ್ಟಿ ಉಪಸ್ಥಿತರಿದ್ದರು. ನರ್ಸಿಂಗ್ ಅಧೀಕ್ಷಕಿ ಜೆಸಿಂತಾ ಕ್ರಾಸ್ತಾ ಸ್ವಾಗತಿಸಿದರು. ಪ್ರಮೀಳಾ ಡಿಸೋಜ ವಂದಿಸಿದರು. ರೀಮಾ ಡಿಸೋಜ ಮತ್ತು ಸಾಲಿಯಾ ಕಾರ್ಯಕ್ರಮ ನಿರೂಪಿಸಿದರು.