ಸುಳ್ಯ: ಸೂರ್ತಿಲ ಶ್ರೀನಿಧಿ ಮಹಿಳಾ ಮಂಡಲ ಕಾಯರ್ತೋಡಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಶ್ರೀನಿಧಿ ಮಹಿಳಾ ಮಂಡಲದ ಸಭಾಂಗಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಒಕ್ಕೂಟದ ಜತೆ ಕಾರ್ಯದರ್ಶಿ ಮಧುಮತಿ ಬೊಳ್ಳೂರು ಮಾತನಾಡಿ, ಮಹಿಳೆಯರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಆರೋಗ್ಯಕರ ಚರ್ಚೆ ನಡೆಸಬೇಕು. ಆ ಮೂಲಕ ತಮ್ಮ ಅಭ್ಯುದಯದ ಜತೆಗೆ ಸಮಾಜದ ಸ್ವಾಸ್ಥೃ ಕಾಪಾಡಬೇಕು ಎಂದರು.
ಶ್ರೀನಿಧಿ ಮಹಿಳಾ ಮಂಡಲದ ಅಧ್ಯಕ್ಷೆ ಕಲಾವತಿ ತೀರ್ಥರಾಮ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಕ್ತೇಶ್ವರಿ ಸೇವಾ ಸಮಿತಿಯ ಸದಸ್ಯ ತೀರ್ಥರಾಮ ಕಾಯರ್ತೋಡಿ ಮುಖ್ಯ ಅತಿಥಿಯಾಗಿದ್ದರು.ನಿವೃತ್ತಿ ಹೊಂದಿದ ಮಹಿಳಾ ಮಂಡಲದ ಸದಸ್ಯೆ ಲೀಲಾವತಿ ಜೆ.ಶೆಟ್ಟಿ ಅವರನ್ನು ಮಹಿಳಾ ಮಂಡಲದ ವತಿಯಿಂದ ಸನ್ಮಾನಿಸಲಾಯಿತು.
ಮಹಿಳಾ ಮಂಡಲದ ಉಪಾಧ್ಯಕ್ಷೆ ಶಾರದಾ ಜಯರಾಮ ಸ್ವಾಗತಿಸಿದರು. ಕಾರ್ಯದರ್ಶಿ ಜ್ಯೋತಿ ಹರೀಶ್ ವಂದಿಸಿದರು. ಪ್ರಿಯಾ ಬಳ್ಳಡ್ಕ ಕಾರ್ಯಕ್ರಮ ನಿರೂಪಿಸಿದರು.