ಜಿಲ್ಲೆ

ಜಿಲ್ಲಾಡಳಿತದಿಂದ ಯೋಗ ದಿನಾಚರಣೆಗೆ ಚಾಲನೆ

ಹರೀಶ ಎಂ.

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಬುಧವಾರ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.


ಸಂಸದ, ಶಾಸಕರಾದ ಡಿ.ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ,ಮೇಯರ್ ಜಯಾನಂದ ಅಂಚನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎಸ್ಪಿ ರಿಷ್ಯಂತ್, ಡಿಎಚ್‌ಒ ಡಾ.ಕಿಶೋರ್ ಕುಮಾರ್, ಬ್ರಹ್ಮಕುಮಾರಿ ಅಂಬಿಕಾ, ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ, ಎಸಿಪಿ ಗೀತಾ ಕುಲಕರ್ಣಿ ಮೊದಲಾದವರು ಉಪಸ್ಥಿತರಿದ್ದರು.


ಗೃಹರಕ್ಷಕದಳ, ಯೋಗ ಸಂಘಟನೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್ ಸ್ವಾಗತಿಸಿದರು.