ಲಿಂಗಸುಗೂರು ನ್ಯಾಯಾಲಯ ಸಂಕೀರ್ಣದಲ್ಲಿ ಏರ್ಪಡಿಸಿದ್ದ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಅಭಿಯಾನ ಸಭೆಯಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಮಾತನಾಡಿದರು. ಸಿವಿಲ್ ನ್ಯಾಯಾಧೀಶ ಅಂಬಣ್ಣ ಕೆ., ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ್, ಉಪಾಧ್ಯಕ್ಷ ಬಸವರಾಜ ವಸ್ತ್ರದ, ಕಾರ್ಯದರ್ಶಿ ಬಾಲರಾಜ ಸಾಗರ ಮಾನಮಟ್ಟಿ ಇತರರಿದ್ದರು. 
ಜಿಲ್ಲೆ

ಮಧ್ಯಸ್ಥಿಕೆ ಅಭಿಯಾನದ ಪ್ರಯೋಜನ ಪಡೆಯಿರಿ

Kopala - Desk - Eraveni

ಲಿಂಗಸುಗೂರು: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸೂರ್ಯಕಾಂತ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ದೇಶದ ಎಲ್ಲ ನ್ಯಾಯಾಲಯಗಳಲ್ಲಿ ಜು.1 ರಿಂದ ಅ.7ರವರೆಗೆ 90 ದಿನಗಳ ಕಾಲ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ನ್ಯಾ. ಉಂಡಿ ಮಂಜುಳಾ ಶಿವಪ್ಪ ಹೇಳಿದರು.

ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಅಭಿಯಾನದ ಸಭೆಯಲ್ಲಿ ಮಾತನಾಡಿದರು.

ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ಮಧ್ಯಸ್ಥಿಕೆ ಅಭಿಯಾನ ಆಯೋಜಿಸಲಾಗಿದೆ.

ಈ ಅಭಿಯಾನ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ. ರಾಜಿ ಆಗಬಹುದಾದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಗಳಿಗೆ ಕಳಿಸಿ ಅಲ್ಲಿ ವಿಶೇಷ ತರಬೇತಿ ಹೊಂದಿದ ಮಧ್ಯಸ್ಥಿಕೆಗಾರರಿಂದ ರಾಜಿಸಂಧಾನ ಮಾಡಿಸುವ ವ್ಯವಸ್ಥೆ ಇದಾಗಿದೆ. ಕಕ್ಷಿದಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಸಿವಿಲ್ ನ್ಯಾಯಾಧೀಶ ಅಂಬಣ್ಣ ಕೆ., ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ್, ಉಪಾಧ್ಯಕ್ಷ ಬಸವರಾಜ ವಸ್ತ್ರದ, ಕಾರ್ಯದರ್ಶಿ ಬಾಲರಾಜ ಸಾಗರ ಮಾನಮಟ್ಟಿ, ಮಧ್ಯಸ್ಥಿಕೆದಾರರಾದ ಕೆ.ಕೆ.ವಿಶ್ವನಾಥ, ಎ.ನಾಗಪ್ಪ, ರುದ್ರಪ್ಪ ಯಲಿಗಾರ, ನಾಗರಾಜ ಗಸ್ತಿ, ಮಾನಪ್ಪ ವಾಲ್ಮೀಕಿ ಇತರರಿದ್ದರು.