ಕುಂದಾಪುರ: ವಿದ್ಯಾರ್ಥಿಗಳಿಗೆ ನಾಡಿನ ಸಂಸ್ಕೃತಿ ಪರಿಚಯಿಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ರಕ್ಷಾಬಂಧನ ಕೇವಲ ಅಣ್ಣ ತಂಗಿಯರ ಬಾಂಧವ್ಯ ಗಟ್ಟಿಗೊಳಿಸುವುದಾಗಿರದೆ ಇಡೀ ಸದೃಢ ಸಮಾಜ ನಿರ್ಮಿಸುವುದಕ್ಕೆ ಇದು ಪೂರಕ ಎಂದು ಗುರುಕುಲ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಡಾ.ರೂಪಾ ಶೆಣೈ ಹೇಳಿದರು.
ಕೋಟೇಶ್ವರದ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ರಕ್ಷಾಬಂಧನ, ಕ್ವಿಟ್ ಇಂಡಿಯಾ ಚಳುವಳಿ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.
1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳುವಳಿಯ ಮಹತ್ವ, ಮಹಾತ್ಮ ಗಾಂಧಿಯ ಅವಿರತ ಹೋರಾಟದ ಬದುಕು ಪರಿಚಯಿಸಿ ಶುಭ ಕೋರಿದರು. ಯುಕೆಜಿ, ಎಲ್‌ಕೆಜಿ ವಿದ್ಯಾರ್ಥಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಕಾರ್ಯಕ್ರಮವನ್ನು ಅರ್ಥಪೂರ್ಣ ಗೊಳಿಸಲಾಯಿತು. ವಿದ್ಯಾರ್ಥಿನಿ ಅವನಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಶಶಾಂಕ್ ವಂದಿಸಿದರು.