ಕಾರ್ಕಳ: ಭವಿಷ್ಯದ ದೃಷ್ಟಿಯಿಂದ ಹೂಡಿಕೆ ಬಹಳ ಅಗತ್ಯವಾಗಿದೆ. ಆದರೆ ಎಲ್ಲಿ ಹೇಗೆ, ಯಾವುದರಲ್ಲಿ, ಯಾವಾಗ ಹೂಡಿಕೆ ಮಾಡಬೇಕೆಂಬ ಪೂರ್ವಾಲೋಚನೆ ಅತೀ ಅಗತ್ಯ. ಹೂಡಿಕೆ ಮಾಡುವುದರ ಜತೆಗೆ ಅದರ ನಿರ್ವಹಣಾ ವಿಧಾನಗಳ ಬಗ್ಗೆ ಜ್ಞಾನ ಹೊಂದಿರಬೇಕು. ವಿವೇಚನಾ ರಹಿತ ಹೂಡಿಕೆಗಳಿಂದ ಆರ್ಥಿಕ ಅಪಾಯವಾಗಬಹುದು. ಪ್ರಸ್ತುತ ಕಾಲಘಟ್ಟದಲ್ಲಿ ಮ್ಯೂಚ್ವಲ್ ಂಡ್‌ಗಲ್ಲಿ ಹೂಡಿಕೆ ಮಾಡುವುದು ಒಳ್ಳೆಯ ನಿರ್ಧಾರ ಎಂದು ಹೆಚ್‌ಡಿಎ್ಸಿ ಮ್ಯೂಚ್ವಲ್ ಂಡ್ಸ್‌ನ ಉಡುಪಿ ಶಾಖಾ ವ್ಯವಸ್ಥಾಪಕ ಪ್ರತಾಪ್ ನಾಕ್ ಹೇಳಿದರು.
ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ನಡೆದ ಹೂಡಿಕೆ ಜಾಗೃತಿ ಮತ್ತು ನಿರ್ವಹಣೆ ಎಂಬ ವಿಷಯದ ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಸಂಸ್ಥೆ ಉಪಪ್ರಾಚಾರ್ಯ, ವಾಣಿಜ್ಯ ವಿಭಾಗ ಮುಖ್ಯಸ್ಥ ಡಾ.ಪ್ರಕಾಶ್ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿನ್ನ, ಷೇರು, ವಿವಿಧ ಆಸ್ತಿ, ಮ್ಯೂಚ್ವಲ್ ಂಡ್‌ಗಳಲ್ಲಿ ಹೂಡಿಕೆ ಮಾಡುವುದರಿಂದ ಭವಿಷ್ಯವನ್ನು ಸುಭದ್ರಗೊಳಿಸುವುದರ ಬಗ್ಗೆ ಮಾಹಿತಿ ನೀಡಿದರು.
ವಾಣಿಜ್ಯ ಶಾಸ್ತ್ರ ಉಪನ್ಯಾಸಕ ದೀಪಕ್ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಶೆಟ್ಟಿ ಸ್ವಾಗತಿಸಿದರು. ಮದಿಹಾ ಾತಿಮ ವಂದಿಸಿದರು. ಜಿತೇಶ್ ಪಿಂಟೊ ಕಾರ್ಯಕ್ರಮ ನಿರೂಪಿಸಿದರು.