ಕೋಟ: ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಭಾರತೀಯ ಚಾರ್ಟರ್ಡ್ ಅಕೌಂಟಂಟ್ ಸಂಸ್ಥೆಯ ಉಡುಪಿ ಶಾಖೆ ಹಾಗೂ ಕೋಟ ಪಡುಕರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಸಹಯೋಗದಲ್ಲಿ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿದ್ದ ಸಿ.ಎ ವಿಷ್ಣು ಆಚಾರ್ಯ ಹೂಡಿಕೆ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲ ಡಾ.ರಾಜೇಂದ್ರ ಎಸ್ ನಾಯಕ ಹಾಗೂ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಶಂಕರ ನಾಯ್ಕ ಬಿ.ಉಪಸ್ಥಿತರಿದ್ದರು ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು. ಸಿ.ಎ ಅಶ್ವಥ್ ಎ. ಶೆಟ್ಟಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ರಾಮಚಂದ್ರ ಭಟ್ ವಂದಿಸಿದರು.