ಜಿಲ್ಲೆ

ಮಕ್ಕಳ ಪೋಟೋ ಸ್ಪರ್ಧೆಗೆ ಭಾವಚಿತ್ರಗಳ ಆಹ್ವಾನ

ಮಂಜೇಶ್ವರ: ತುಳುನಾಡ ಬಾಲೆ ಬಂಗಾರ್ ಸಮಿತಿ ತುಳುವೆರೆ ಆಯನೊ ಕೂಟ ಮಂಜೇಶ್ವರ ಆಶ್ರಯದಲ್ಲಿ ದೇಶಿಯ ಮಕ್ಕಳ ದಿನಾಚರಣೆ ಅಂಗವಾಗಿ ತುಳುನಾಡ ಮಕ್ಕಳ ಹಬ್ಬ ತುಳುನಾಡ ಬಾಲೆ ಬಂಗಾರ್-2024 ಮುದ್ದು ಮಕ್ಕಳ ಪೋಟೋ ಸ್ಪರ್ಧೆ- ಸೀಸನ್ 9 ಕಾರ್ಯಕ್ರಮ ನಡೆಯಲಿದೆ.

ಸ್ಪರ್ಧೆಯಲ್ಲಿ 4 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಭಾಗವಹಿಸುವ ಮಕ್ಕಳ ಪಾಲಕರು ತಮ್ಮ ಮಕ್ಕಳ ಭಾವಚಿತ್ರವನ್ನು 6*9 ಸೈಜ್‌ನಲ್ಲಿ 1 ಭಾವಚಿತ್ರವನ್ನು ಮಾತ್ರ ಕಳುಹಿಸತಕ್ಕದ್ದು, ಭಾವ ಚಿತ್ರದ ಹಿಂದೆ ಮಗುವಿನ ಹೆಸರು, ಹುಟ್ಟಿದ ದಿನ, ತಿಂಗಳು, ಇಸವಿ, ಜನನ ಪ್ರಮಾಣ ಪತ್ರದ ಕರಡು ಪ್ರತಿ, ಪಾಲಕರ ಹೆಸರು, ವಿಳಾಸವನ್ನು ಸ್ಪಷ್ಟವಾಗಿ ಬರೆದಿರತಕ್ಕದ್ದು, ತುಳುನಾಡಿನ ಸಂಸ್ಕೃತಿ, ಸಂಸ್ಕಾರಗಳನ್ನು ಬಿಂಬಿಸುವ ರೀತಿಯಲ್ಲಿನ ಪೋಟೋಗಳಿಗೆ ಸ್ಪರ್ಧೆಯಲ್ಲಿ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಮಕ್ಕಳು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಅರ್ಹರು ಫೋಟೋಗಳನ್ನು ಕೊರಿಯರ್ ಮೂಲಕ ಈ ಕೆಳಗಿನ ವಿಳಾಸಕ್ಕೆ ನ.5ರ ಒಳಗೆ ತಲುಪುವಂತೆ ಕಳುಹಿಸಬಹುದು. ನ.10 ರಂದು ವಿಜೇತರ ಘೋಷಣೆ ನಡೆಯಲಿದೆ. ಪ್ರಥಮ, ದ್ವಿತೀಯ, ತೃತೀಯ, ಚತುರ್ಥ, ಪಂಚಮ ಬಹುಮಾನಗಳು ಹಾಗೂ ಪ್ರಮಾಣ ಪತ್ರ ಮತ್ತು ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳ ಪಾಲಕರು, ರತನ್ ಕುಮಾರ್ ಹೊಸಂಗಡಿ ಅಧ್ಯಕ್ಷರು ತುಳುನಾಡ ಬಾಲೆ ಬಂಗಾರ್ ಸಮಿತಿ, ತುಳುವೆರೆ ಆಯನೊ ಕೂಟ ಮಂಜೇಶ್ವರ, ಸಿಂಡ್ರೆಲಾ ನರ್ಸರಿ ಬಳಿ, ಹೊಸಬೆಟ್ಟು ಮಂಜೇಶ್ವರ - 671323, ಕಾಸರಗೋಡು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕಾಗಿ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗೆ 7034338773ಗೆ ಸಂಪರ್ಕಿಸಲು ಕೋರಲಾಗಿದೆ.