ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳಿಂದ 2025&26ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಒನ್ ಮೂಲಕ 2025 ಸೆ. 10 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.