ಮೈಸೂರು:2023/24 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಒದುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರೈಸ್ತ, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿದ್ದು, ಕೋರ್ಸ್-ಪೂರ್ಣಕಾಲಿಕ ಸ್ನಾತಕೋತ್ತರವಾಗಿರಬೇಕು. ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ವಿದೇಶಿ ವಿಶ್ವವಿದ್ಯಾಲಯವು QS Top-500University Ranking ಪಟ್ಟಿಯಲ್ಲಿ ಸ್ಥಾನ ಪಡೆದಿರಬೇಕು ಹಾಗೂ ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 38 ವರ್ಷ ಮೀರಿರಬಾರದು.
ಸದರಿ ಅರ್ಹತೆಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು https://sevasindhu.karnataka.gov.in/Sevasindhu/DepartmentServices ಆನ್‌ಲೈನ್ ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಬೆಂಗಳೂರಿನ ಅಲ್ಪಸಂಖ್ಯಾತರ ನಿರ್ದೇಶನಾಲಯಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೆಬ್‌ಸೈಟ್ ಅಥವಾ ಹೆಲ್ಪ್ ಡೆಸ್ಕ್ ನಂ:8277799990 ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಛೇರಿಯ ದೂ.ಸಂ:0821-2422088 ಅಥವಾ 8951087207 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.