ಯಲಬುರ್ಗಾ ತಾಲೂಕಿನ ಬೇವೂರಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆ ನಿಯಂತ್ರಣ ಸಪ್ತಾಹ ಕುರಿತ ಕರಪತ್ರ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿ.ಪಿ.ಶಿವಾನಂದ, ವೈದ್ಯಾಧಿಕಾರಿ ಪ್ರವೀಣ, ಸಿಎಚ್‌ಒ ಯಮನೂರಪ್ಪ, ಮಂಜುಳಾ ರಾಠೋಡ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಉಮಾ, ರತ್ನಾ ಇದ್ದರು. 
ಜಿಲ್ಲೆ

ಅಯೋಡಿನ್ ಕೊರತೆಯಿಂದ ಗರ್ಭಪಾತ

ರುದ್ರಪ್ಪ ವಾಲಿ

ಯಲಬುರ್ಗಾ: ಪ್ರತಿಯೊಬ್ಬರೂ ಪೌಷ್ಟಿಕ ಆಹಾರ ಸೇವಿಸುವುದರ ಜತೆಗೆ ಅಯೋಡಿನ್ ಅಂಶವಿರುವ ಉಪ್ಪು ಬಳಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿ.ಪಿ.ಶಿವಾನಂದ ಹೇಳಿದರು.

ತಾಲೂಕಿನ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆ ನಿಯಂತ್ರಣ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿ ವಷರ್ ಅ.21 ರಿಂದ 27ರ ವರೆಗೆ ರಾಷ್ಟ್ರೀಯ ಅಯೋಡಿನ್ ಕೊರತೆಯ ನ್ಯೂನತೆ ನಿಯಂತ್ರಣ ಸಪ್ತಾಹ ಆಚರಿಸಲಾಗುತ್ತೆ. ಮನುಷ್ಯನಿಗೆ ಬದುಕಲು ಮುಖ್ಯವಾಗಿ ನೀರು, ಗಾಳಿ ಹಾಗೂ ಆಹಾರ ಅತ್ಯಂತ ಅವಶ್ಯಕವಾಗಿದೆ. ಅಯೋಡಿನ್ ಅಂಶವಿರುವ ಉಪ್ಪು ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆ ಅತಿ ಅವಶ್ಯ. ಇದು ಮನುಷ್ಯನ ಬುದ್ದಿಮಟ್ಟ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸುತ್ತದೆ. ವಿಶೇಷವಾಗಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳು ಹಾಗೂ ಹದಿಹರೆಯದವರು ಅಯೋಡಿನ್ ಉಪ್ಪು ಬಳಸಬೇಕು ಎಂದರು.

ಅಯೋಡಿನ್ ಅಂಶವಿರುವ ಉಪ್ಪನ್ನು ಬಳಸದಿದ್ದರೆ ಗರ್ಭಿಣಿಯರಲ್ಲಿ ಗರ್ಭಪಾತ, ಸಂತಾನೋತ್ಪಿಯಲ್ಲಿ ತೊಂದರೆ, ದೈಹಿಕ ಬೆಳವಣಿಗೆ ಕುಂಠಿತ, ವಯಸ್ಕರಲ್ಲಿ ನಿಶಕ್ತಿ, ಕಾರ್ಯ ನಿರ್ವಹಣೆಯಲ್ಲಿ ವೈಫಲ್ಯ, ಗಳಗಂಡರೋಗ ಉಂಟಾಗುತ್ತದೆ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಅಯೋಡಿನ್ ಉಪ್ಪು ಬಳಸಬೇಕು ಎಂದು ತಿಳಿಸಿದರು.