ಜಿಲ್ಲೆ

ಹಾಲು ಒಕ್ಕೂಟ ನೇಮಕಾತಿಯಲ್ಲಿ ಅಕ್ರಮ

ಕೃಷ್ಣ ಕುಲಕರ್ಣಿ

ಆಳಂದ: ಕಲಬುರಗಿ, ಬೀದರ್ ಮತ್ತು ಯಾದಗಿರಿ ಹಾಲು ಒಕ್ಕೂಟದ ಹಿಂದಿನ ಅಧ್ಯಕ್ಷ ಆರ್.ಕೆ.ಪಾಟೀಲ್ ಅವಧಿಯಲ್ಲಿ ಯಾವುದೇ ಪ್ರಗತಿ ಕಾರ್ಯಗಳು ಆಗಿಲ್ಲ. ಕೇವಲ ಪ್ರಚಾರಕ್ಕಾಗಿ ಒಕ್ಕೂಟ ಬಳಸಿಕೊಂಡಿದ್ದಾರೆ. ಅಲ್ಲದೆ ಅವರ ಅವಧಿಯಲ್ಲಿ ಜರುಗಿದ ನೇಮಕಾತಿಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ್ ದೂರಿದರು.

2019ರಲ್ಲಿ ಕಲಬುರಗಿ, ಬೀದರ್ ಮತ್ತು ಯಾದಗಿರಿ ಹಾಲು ಒಕ್ಕೂಟದಲ್ಲಿ ವಿವಿಧ 37 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಕೆಲವರು ನೇಮಕಾತಿ ವಿರುದ್ಧ ಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶ ಪರಿಗಣಿಸಿ ಈ ಹಿಂದಿನ ಯಾವ ವ್ಯವಸ್ಥಾಪಕ ನಿರ್ದೇಶಕರು ನೇಮಕಾತಿ ಪ್ರಕ್ರಿಯೆ ಕೈಗೊಂಡಿರಲಿಲ್ಲ. ಆದರೆ ಒಕ್ಕೂಟದ ಅಧ್ಯಕ್ಷ ಆರ್.ಕೆ.ಪಾಟೀಲ್ ಅವರು ಅಕ್ರಮ ನಡೆಸುವ ಉz್ದೆÃಶದಿಂದಲೇ ಅಧಿಕಾರ ಪೂರ್ಣಗೊಳ್ಳುವುದಕ್ಕೂ 3 ತಿಂಗಳ ಮುಂಚಿತ ಕರ್ನಾಟಕ ಹಾಲು ಮಂಡಳಿ ಮೇಲೆ ಒತ್ತಡ ಹೇರಿ ಡಾ.ಸಿ.ಎಚ್.ಕಮಕೇರಿ ಅವರನ್ನು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಿ, ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ವಿವಿಧ ಹುದ್ದೆಗಳ ಭರ್ತಿಗೆ ದೊಡ್ಡ ಮೊತ್ತದ ವ್ಯವಹಾರ ಕುದುರಿಸಲಾಗಿದ್ದು, ಆದೇಶ ಪತ್ರದಲ್ಲಿ ನೇಮಕಾತಿಯು ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿದೆ ಎಂದು ಬರೆಯಲಾಗಿದೆ. ಪ್ರಕರಣ ನ್ಯಾಯಾಲಯದಲ್ಲಿದ್ದರೂ ತರಾತುರಿಯಲ್ಲಿ ನೇಮಕ ಪ್ರಕ್ರಿಯೆಗೆ ಚಾಲನೆ ನೀಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಪ್ರಕರಣ ಸಮಗ್ರ ತನಿಖೆ ಮಾಡಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ಆನಂದರಾವ ಪಾಟೀಲ್, ಸಂಜಯ ಮಿಸ್ಕಿನ್ ಇತರರಿದ್ದರು.