ಹುಬ್ಬಳ್ಳಿ : ಇಂದಿನ ವಾತಾವರಣದಲ್ಲಿ ಕಾಂಗ್ರೆಸ್ಗೆ ಚುನಾವಣೆ ಎದುರಿಸುವುದೇ ಕಷ್ಟವಾಗಿದೆ. ರಾಜ್ಯ ಸರ್ಕಾರದ ದುರಾಡಳಿತ, ಸ್ಥಗಿತಗೊಂಡಿರುವ ಅಭಿವೃದ್ಧಿ ಕೆಲಸಗಳಿಂದ ಜನರು ಅಸಮಾಧಾನಗೊಂಡಿದ್ದಾರೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು. ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಮತದಾರರು ಸರ್ಕಾರದ ಆಡಳಿತ ವೈಖರಿಯಿಂದ ಭ್ರಮನಿರಸನಗೊಂಡಿದ್ದಾರೆ ಎಂದರು.
ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನನ್ನ ಹೆಸರು ಕೇಳಿಬಂದಿತ್ತು. ಆದರೆ, ನಾನು ಆಕಾಂಕ್ಷಿ ಅಲ್ಲವೆಂದು ದೆಹಲಿಯಲ್ಲಿಯೇ ಸ್ಪಷ್ಟಪಡಿಸಿದ್ದೆ ಎಂದು ಹೇಳಿದರು.
ಇಡೀ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯ ಗೆಲ್ಲುವ ಅಭ್ಯರ್ಥಿ ಎಂದರೆ ಭರತ್ ಬಸವರಾಜ ಬೊಮ್ಮಾಯಿ ಅವರು. ಇದೇ ಕಾರಣದಿಂದ ಪಕ್ಷ ಅವರಿಗೆ ಟಿಕೆಟ್ ನೀಡಿದೆ. ಒಂದು ವಾರದವರೆಗೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತೇನೆ. ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ ಎಂದರು.