ಬೆಳಗಾವಿ: ಅರಣ್ಯ ಇಲಾಖೆ ಸಿಬ್ಬಂದಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕು. ಅರಣ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ಸದಾ ಸ್ಮರಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೇಷನ್ಸ್ ನ್ಯಾಯಾಧೀಶ ಟಿ.ಎನ್.ಇನವಳ್ಳಿ ಹೇಳಿದರು.
ನಗರದ ಮುಖ್ಯ ಅರಣ್ಯ ಸಂರಣಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದ ಒಂದಿಂಚೂ ಜಾಗವೂ ನಾಶವಾಗದಂತೆ ಸಿಬ್ಬಂದಿ ಮತ್ತು ಪೊಲೀಸರು ನೋಡಿಕೊಳ್ಳಬೇಕು. ಅರಣ್ಯ ಸಂರಣೆಗಾಗಿ ನೀಡಿದ ಬಲಿದಾನ ಸ್ಮರಿಸಬೇಕು ಎಂದರು.
ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಣಾಧಿಕಾರಿ ಮಂಜುನಾಥ ಚವ್ಹಾಣ, ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ, ಉತ್ತರ ವಲಯ ಐಜಿಪಿ ಚೇತನ್ಸಿಂಗ್ ರಾಠೋರ್, ನಗರ ಪೊಲೀಸ್ ಕಮಿಷನರ್ ಭೂಷಣ ಬೋರಸೆ, ಎಸ್ಪಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್ ಉಪ ಆಯುಕ ನಾರಾಯಣ ಭರಮನಿ, ಕಾಡಾ ಜಂಟಿನಿರ್ದೇಶಕ ಎಸ್.ಬಿ.ಕೊಂಗವಾಡ ಪುಷ್ಪಗುಚ್ಛ ಅರ್ಪಿಸಿ ಹುತಾತ್ಮರಿಗೆ ಗೌರವ ಸಲ್ಲಿಸಿದರು. ಬಳಿಕ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹುತಾತ್ಮರಿಗೆ ಗೌರವ ಸಮರ್ಪಿಸಲಾಯಿತು.
ಬೆಳಗಾವಿ ವಿಭಾಗದ ಉಪಅರಣ್ಯ ಸಂರಣಾಧಿಕಾರಿ ಪ್ರಭಾಕರ ಪ್ರಿಯದರ್ಶಿ, ಬೆಳಗಾವಿ ಉಪವಿಭಾಗದ ಸಹಾಯಕ ಅರಣ್ಯ ಸಂರಣಾಧಿಕಾರಿ ನಾಗರಾಜ ಬಾಳೆಹೊಸೂರ, ಬೆಳಗಾವಿ ವಲಯ ಅರಣ್ಯಾಧಿಕಾರಿ ಪ್ರಶಾಂತ ಗೌರಾಣಿ ಇತರರಿದ್ದರು.