ಜಿಲ್ಲೆ

ಗರ್ಭಿಣಿ, ಮಕ್ಕಳ ಆರೋಗ್ಯದತ್ತ ಕಾಳಜಿ ಅಗತ್ಯ

ಕಲಘಟಗಿ: ಗ್ರಾಮೀಣ ಪ್ರದೇಶದಲ್ಲಿನ ಗರ್ಭಿಣಿಯರು, ಬಾಣಂತಿಯರು ಹಾಗೂ ಶಿಶುಗಳ ಆರೋಗ್ಯದ ಕುರಿತು ಹೆಚ್ಚಿನ ಗಮನ ಹರಿಸಲು ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದು ಸಿಆರ್​ಪಿ ಶರೀಫ್ ಹರಿಜನ ಹೇಳಿದರು.

ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸ್ಥಳೀಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಆಶ್ರಯದಲ್ಲಿ ತಾಲೂಕಿನ ಬಮ್ಮಿಗಟ್ಟಿ ವಲಯದ ತಂಬೂರ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿರಾದ ಶೋಭಾ ಗೌರಿ, ಸುನಂದಾ ಗಲಗಲಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಿಂದ ವಿವಿಧ ರೀತಿಯ ಪೌಷ್ಟಿಕ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಗೌಸಿಯಾಬಾನು ಮುಲ್ಲಾ, ಉಪಾಧ್ಯಕ್ಷ ಮಹಾಂತೇಶ ಚಿಕ್ಕಲಗಿ, ರೇಣುಕಾ ಉಳ್ಳಾಗಡ್ಡಿ, ಮೇಲ್ವಿಚಾರಕಿ ಶಂಕ್ರಮ್ಮ ಭೋವಿ, ಸಾವಿತ್ರಿ ಟೊಂಗಳೆ, ಲಕ್ಷ್ಮೀ ನೆಸ್ರೇಕರ ಇತರರಿದ್ದರು.