ಕುರುಗೋಡು: ಸ್ವಾತಂತ್ರ್ಯ ಹಾಗೂ ಸಮಾನತೆ ಸಾರುವ ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಹಸೀಲ್ದಾರ್ ಕೆ.ರಾಘವೇಂದ್ರ ರಾವ್ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂವಿಧಾನ ರಚಿಸಿದ ಅಂಬೇಡ್ಕರ್‌ನ್ನು ನಾವೆಲ್ಲ ನೆನೆಪಿಸಿಕೊಳ್ಳುವ ಮೂಲಕ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರೂ ಸಂವಿಧಾನಕ್ಕೆ ಬದ್ಧರಾಗಿರಬೇಕು ಎಂದರು.
ಸಂವಿಧಾನ ಪ್ರತಿಜ್ಞ್ಞಾವಿಧಿ ಭೋದಿಸಲಾಯಿತು. ಗ್ರೇಡ್-2 ತಹಸೀಲ್ದಾರ್ ಮಲ್ಲೇಶಪ್ಪ, ತಾಪಂ ಇಒ ನಿರ್ಮಲಾ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಿ.ನಾಗರಾಜ, ಉಪಪ್ರಾಚಾರ್ಯ ಗಾಳಿ ಮಾರುತಿ, ಮುಖ್ಯ ಶಿಕ್ಷಕ ಎಸ್.ಎಂ.ಗುರುಬಸವರಾಜ, ದೈಹಿಕ ಶಿಕ್ಷಕ ಶಾಂತನಾಯಕ್ ಇತರರಿದ್ದರು.