ವಿಜಯಪುರ: ಕನ್ನಡ ಭಾಷೆ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನದ್ದಾಗಬೇಕು. ಅದಕ್ಕಾಗಿ ಕನ್ನಡ ಮಾಧ್ಯಮದ ಮೂಲಕವೇ ಶಿಕ್ಷಣ ನೀಡಬೇಕು. ಕನ್ನಡ ಆಡಳಿತ ಭಾಷೆಯಾಗಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ರಿಷಿ ಆನಂದ ಅಭಿಪ್ರಾಯ ಪಟ್ಟರು.
ನಗರದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಸೋಮವಾರ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಗುರುಮಠ ಕನ್ನೂರದ ಸೋಮನಾಥ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ್ ಅಜೂರ ಅಧ್ಯಕ್ಷತೆ ವಹಿಸಿದ್ದರು. ಪಪೂ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ ಹೊಸಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಪಶು ಸಂಗೋಪನ ಇಲಾಖೆಯ ಉಪನಿರ್ದೇಶಕ ಅಶೋಕ ಘೋಣಸಗಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಪುಂಡಲೀಕ ಮಾನವರ, ನ್ಯಾಯವಾದಿ ನಾಗರಾಜ ಲಂಬು, ನಾಲತವಾಡ ಕಸಾಪ ಹೋಬಳಿ ಘಟಕದ ಅಧ್ಯಕ್ಷ ದತ್ತಾತ್ರೇಯ ಮಳಖೇಡ ಮತ್ತಿತರರಿದ್ದರು.
ಎಸ್. ಬಿ ಬಿರಾದಾರ ಸ್ವಾಗತಿಸಿದರು, ಮಹ್ಹದರಫೀ ಅರಳಿಮಟ್ಟಿ ನಿರೂಪಿಸಿದರು. ಶಿಕ್ಷಕ ಗಣಪತಿ ಗಳವೆ ವಂದಿಸಿದರು. ಯಮನಪ್ಪ ಮಿಣಜಿಗಿ ನಿರ್ವಹಿಸಿದರು. ಮೆರವಣಿಗೆಯಲ್ಲಿ ಹತ್ತಕ್ಕೂ ಹೆಚ್ಚು ಕಲಾ ತಂಡಗಳು ಭಾಗವಹಿಸಿದ್ದವು. ಸಮ್ಮೇಳನದ ಸರ್ವಾಧ್ಯಕ್ಷ ಶ್ರೀ ಮನಿಪ್ರ ಚನ್ನಬಸವ ಮಹಾಸ್ವಾಮಿಗಳು ಅಲಂಕೃತ ಸಾರೋಟದಲ್ಲಿ ರಾರಾಜಿಸಿದರು.