ಜಿಲ್ಲೆ

ಐಟಿ ಕ್ವಿಜ್​ ಕಾರ್ಯಕ್ರಮ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಇಲ್ಲಿನ ರಾಯಾಪುರದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಟ್ಟಡದಲ್ಲಿ ನ. 5ರಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿ ವಿಭಾಗದ ಮಟ್ಟದ ಗ್ರಾಮೀಣ ಐಟಿ ಕ್ವಿಜ್​ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಪಂ ಸಿಇಒ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಶಾಲಾ ಶಿಕ್ಷಣ ಇಲಾಖೆ ಅಪರ ಆಯುಕ್ತೆ ಜಯಶ್ರೀ ಶಿಂತ್ರಿ, ಟಿಸಿಎಸ್​ ಜನರಲ್​ ಮ್ಯಾನೇಜರ್​ ಶೋಭಾ ಮೂರ್ತಿ ಹಾಗೂ ಕ್ವಿಜ್​ ಮಾಸ್ಟರ ರಶ್ಮಿ ವಿಶೇಷ ಆಹ್ವಾನಿತರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.