ಹುಬ್ಬಳ್ಳಿ: ಇಲ್ಲಿಯ ತಾರಿಹಾಳ ಸರ್ಕಾರಿ ಪಾಲಿಟೆಕ್ನಿಕ್ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಅಡಿ ಪ್ರೇರಣಾ ಕಾರ್ಯಕ್ರಮದ ಭಾಗವಾಗಿ ಸಾಫ್ಟ್ ಸ್ಕಿಲ್ ಕುರಿತು ಉಪನ್ಯಾಸ ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ವಿ.ಆರ್. ಡೋಣೂರಮಠ ಮಾತನಾಡಿ, ವಿದ್ಯಾರ್ಥಿಗಳು ಪಾಠ, ಪ್ರವಚನಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಗುರುಹಿರಿಯರಲ್ಲಿ ವಿನಮ್ರತೆಯಿಂದ ನಡೆದುಕೊಳ್ಳಬೇಕು, ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬೆಳೆಯಬೇಕೆಂದು ಸಲಹೆ ನೀಡಿದರು.
ಪ್ರಾಚಾರ್ಯ ಎ.ಬಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಎನ್.ಬಿ. ಬಮ್ಮಿಗಟ್ಟಿ ಕಾರ್ಯಕ್ರಮ ನಿರೂಪಿಸಿದರು. ಎಸ್.ಎನ್. ವೈದ್ಯ ವಂದಿಸಿದರು. ವಿ.ಜಿ. ಹಿರೇಮಠ ಇದ್ದರು.