ಜಿಲ್ಲೆ

ಭಿನ್ನಮತವಲ್ಲ, ಪಕ್ಷ ಬಲವರ್ಧನೆ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕೂಡಲಸಂಗಮದಿಂದ ಬಳ್ಳಾರಿಯವರೆಗೆ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಯು ಬಿಜೆಪಿಯನ್ನು ಬಲವರ್ಧನೆಗೊಳಿಸುವ ಉದ್ದೇಶ ಹೊಂದಿದೆಯೇ ಹೊರತು ಭಿನ್ನಮತವಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪಾದಯಾತ್ರೆಗೆ ಹೈಕಮಾಂಡ್ ಇನ್ನೂ ಒಪ್ಪಿಗೆ ನೀಡಿಲ್ಲ. ಒಳ್ಳೆಯ ಉದ್ದೇಶದಿಂದ ಪಾದಯಾತ್ರೆ ನಡೆಸಲು ಮುಂದಾಗಿದ್ದೇವೆ ಎಂದು ಯತ್ನಾಳ ಅವರು ಪಕ್ಷದ ಹೈಕಮಾಂಡ್​ಗೆ ಸಂದೇಶ ರವಾನಿಸಿದ್ದಾರೆ. ಹೈಕಮಾಂಡ್ ಒಪ್ಪಿಗೆ ನೀಡಿದರೆ ನಾವು ಸಹ ಪಾದಯಾತ್ರೆಯಲ್ಲಿ ಭಾಗವಹಿಸುತ್ತೇವೆ ಎಂದರು.

ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರಿನವರೆಗೆ ನಡೆದ ಪಾದಯಾತ್ರೆಯು ಅತ್ಯಂತ ಯಶಸ್ವಿಯಾಗಿದೆ. ಅದೇ ರೀತಿ ಉತ್ತರ ಕರ್ನಾಟಕ ಭಾಗದಲ್ಲಿ ಪಾದಯಾತ್ರೆ ನಡೆಸಿ ಪಕ್ಷವನ್ನು ಬಲವರ್ಧನೆಗೊಳಿಸುವ ಉದ್ದೇಶವನ್ನು ಯತ್ನಾಳ ಹೊಂದಿದ್ದಾರೆ ಎಂದು ಹೇಳಿದರು.