ಜಿಲ್ಲೆ

ಶನಿವಾರ ಜಗದ್ಗುರು ರೇಣುಕಾಚಾರ್ಯ ಜಯಂತಿ; ಎಸ್‌ಜೆಆರ್‌ ಕಾಲೇಜಿನಲ್ಲಿ ಕಾಯಕ್ರಮ

ಬೆಂಗಳೂರು: ಏ.26 ಶನಿವಾರದಂದು ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವವನ್ನು ಶ್ರೀಜಗದ್ಗುರು ರೇಣುಕಾಚಾರ್ಯ ಕಾಲೇಜು (ಎಸ್.ಜೆ.ಆರ್.ಸಿ) ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆನಂದರಾವ್ ವೃತ್ತದಲ್ಲಿರುವ ಶ್ರೀಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಬಾಳೆಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ವಹಿಸಲಿದ್ದಾರೆ. ಎಡೆಯೂರಿ ಶ್ರೀ ರೇಣುಕ ಶಿವಾಚಾರ್ಯ ಸ್ವಾಮಿಗಳು, ಸಿದ್ಧರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ. ಶ್ರೀಜಗದ್ಗುರು ರೇಣುಕಾಚಾರ್ಯರ ಸಾಮಾಜಿಕ ಕ್ರಾಂತಿ ಎಂಬ ವಿಷಯದ ಕುರಿತು ಪ್ರೊ. ಎಚ್.ವಿ.ಪಂಚಾಕ್ಷರಯ್ಯ ಉಪನ್ಯಾಸ ನೀಡಲಿದ್ದಾರೆ.

ಡಿಕೆಶಿಗೆ ‘ಶ್ರೀಜಗದ್ಗುರು ರೇಣುಕ ಸಿರಿ’ ಪ್ರಶಸ್ತಿ

ಶ್ರೀಜಗದ್ಗುರು ರಂಭಾಪುರಿ ಪೀಠದ 119ನೇ ಜಗದ್ಗುರುಗಳಾಗಿದ್ದ ಲಿಂಗೈಕ್ಯ ಗಂಗಾಧರ ಜಗದ್ಗುರುಗಳ (ಅಜ್ಜಯ್ಯ) ಪರಮ ಶಿಷ್ಯರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ‘ಶ್ರೀಜಗದ್ಗುರು ರೇಣುಕ ಸಿರಿ’ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಯು.ಎಂ.ಬಸವರಾಜ್ ತಿಳಿಸಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿತ್ತು.