ಜಗಳೂರು: ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿ ಆವರಣದ ಸಾರ್ವಜನಿಕ ಗ್ರಂಥಾಲಯಕ್ಕೆ ಪಿಯುಸಿಗೆ ಸಂಬಂಧಿತ 60ಕ್ಕೂ ಹೆಚ್ಚು ಪುಸ್ತಕಗಳನ್ನು ಭರಮಸಮುದ್ರ ಗ್ರಾಮದ ನಿವೃತ್ತ ಮುಖ್ಯಶಿಕ್ಷಕ ಎಚ್.ಎನ್. ಶಿವಶಂಕರ್ ಮಂಗಳವಾರ ಕೊಡುಗೆಯಾಗಿ ನೀಡಿದ್ದಾರೆ.
ಗ್ರಂಥಾಲಯಕ್ಕೆ ನಿತ್ಯ ನೂರಾರು ವಿದ್ಯಾರ್ಥಿಗಳು ಓದಲು ಬರುತ್ತಾರೆ. ಈಗಾಗಲೇ ಪಿಯುಸಿ ಪರೀಕ್ಷೆ ಮುಗಿದ್ದು, ಮುಂದಿನ ಶೈಕ್ಷಣಿಕ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಪಿಯುಸಿಯಲ್ಲಿ ವಿಜ್ಞಾನ ಮತ್ತು ಕಲಾ ವಿಭಾಗಕ್ಕೆ ಸಂಬಂಧಿತ 60ಕ್ಕೂ ಹೆಚ್ಚು ಪುಸ್ತಕಗಳನ್ನು ಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಮನೆಯಲ್ಲಿ ಪುಸ್ತಕಗಳು ಧೂಳು ಹಿಡಿಯುವ ಬದಲು ಗ್ರಂಥಾಲಯಕ್ಕೆ ನೀಡಿದರೆ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಎಚ್.ಎನ್. ಶಿವಶಂಕರ್ ಹೇಳಿದರು.